×
Ad

ರಾಜೀವ್ ಚಂದ್ರಶೇಖರ್ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ

Update: 2018-03-12 20:02 IST

ಬೆಂಗಳೂರು, ಮಾ. 12: ರಾಜ್ಯಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಗಿಟ್ಟಿಸುವಲ್ಲಿ ಯಶಸ್ವಿಯಾಗಿರುವ ಉದ್ಯಮಿ ರಾಜೀವ್ ಚಂದ್ರಶೇಖರ್ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದರು.

ರಾಜ್ಯಸಭೆಗೆ ಪಕ್ಷೇತರರಾಗಿ ಬಿಜೆಪಿ ಬೆಂಬಲದೊಂದಿಗೆ ಎರಡು ಅವಧಿಯಲ್ಲಿ ಆಯ್ಕೆಯಾಗಿದ್ದ ರಾಜೀವ್ ಚಂದ್ರಶೇಖರ್, ಈ ಬಾರಿ ಬಿಜೆಪಿಯ ಅಧಿಕೃತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ರಾಜೀವ್ ಚಂದ್ರಶೇಖರ್ ಎನ್‌ಡಿಎ ಕೇರಳ ಘಟಕದ ಉಪಾಧ್ಯಕ್ಷರಾಗಿದ್ದಾರೆ.

ಸೋಮವಾರ ಮಲ್ಲೇಶ್ವರಂ ಬಿಜೆಪಿ ಕಚೇರಿಗೆ ಆಗಮಿಸಿದ ರಾಜೀವ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ಪ್ರಮುಖ ಮುಖಂಡರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News