×
Ad

ಮಾ.15:ವಿಶ್ವ ಗ್ರಾಹಕರ ದಿನಾಚರಣೆ

Update: 2018-03-12 21:49 IST

ಉಡುಪಿ, ಮಾ.12: ಜಿಲ್ಲಾಡಳಿತ, ಜಿಲ್ಲಾ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಉಡುಪಿ, ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರ, ಬಸ್ರೂರು ಬಳಕೆದಾರರ ವೇದಿಕೆ ಕುಂದಾಪುರ, ಉಡುಪಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ಮತ್ತು ವಾರ್ತಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಗ್ರಾಹಕರ ದಿನಾಚರಣೆ ಮಾ.15ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ.

ಕಾರ್ಯಕ್ರಮ ಕುಂಜಿಬೆಟ್ಟಿನ ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ನಡೆಯಲಿದ್ದು, ರಾಜ್ಯ ಮೀನುಗಾರಿಕೆ, ಯುವಸಬಲೀಕರಣ ಹಾಗೂ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಉದ್ಘಾಟಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News