ಕಣಚೂರು ಶಿಕ್ಷಣ ಸಂಸ್ಥೆಯಲ್ಲಿ ಮತದಾನ ಅರಿವು ಕಾರ್ಯಕ್ರಮ
Update: 2018-03-12 22:14 IST
ಕೊಣಾಜೆ, ಮಾ. 12: ಕಣಚೂರು ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಆ್ಯಂಡ್ ಸಯನ್ಸ್ ಪದವಿ ಕಾಲೇಜು ಮತ್ತು ಮಂಗಳೂರು ವಿಶ್ವವಿದ್ಯಾನಿಲ0ುದ ಹಳೆ ವಿದ್ಯಾರ್ಥಿಗಳ ಸಂಘ ಇವುಗಳ ಆಶ್ರಯದಲ್ಲಿ ವಿದ್ಯಾರ್ಥಿನಿಯರಿಗೆ ಮತದಾನ ಅರಿವು ಕಾರ್ಯಕ್ರಮವು ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಮಂಗಳೂರು ವಿಶ್ವವಿದ್ಯಾನಿಲಯದ ಹಳೆ ವಿದ್ಯಾರ್ಥಿಗಳ ಸಂಘದ ಪದಾಧಿಕಾರಿಗಳಾದ ನ್ಯಾಯವಾದಿ ಚಂದ್ರಹಾಸ್ ಕೆ. ಅವರು ಮೂಲಭೂತ ಹಕ್ಕುಗಳಲ್ಲಿ ಮತದಾನದ ಹಕ್ಕು ಕೂಡಾ ಒಂದು. ವಿದ್ಯಾರ್ಥಿನಿಯರು ಮತದಾನದ ಬಗ್ಗೆ ನಿರ್ಲಕ್ಷ ವಹಿಸದೆ 18 ವರ್ಷ ತುಂಬಿದ ಎಲ್ಲಾ ವಿದ್ಯಾರ್ಥಿನಿಯರು ಮತದಾನದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಮತ ಚಲಾಯಿಸಬೇಕು ಎಂದು ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಇಕ್ಬಾಲ್ ಅಹಮದ್ ಯು.ಟಿ., ನ್ಯಾಯವಾದಿ ಮಧುಸೂದನ್ ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕಿ ಜಯಶ್ರೀ ಸ್ವಾಗತಿಸಿದರು, ಇಂಗ್ಲೀಷ್ ವಿಭಾಗದ ಉಪನ್ಯಾಸಕಿ ಸಂಧ್ಯಾ ವಂದಿಸಿದರು.