×
Ad

ಶಾಮನೂರು ಶಿವಶಂಕರಪ್ಪ ಬಿಜೆಪಿ ಸೇರುತ್ತಾರೆ ಎನ್ನುವುದು ಶುದ್ಧಸುಳ್ಳು: ಎಸ್.ಎಸ್. ಮಲ್ಲಿಕಾರ್ಜುನ್

Update: 2018-03-12 22:57 IST

ದಾವಣಗೆರೆ,ಮಾ.12: ನಮ್ಮ ತಂದೆ, ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಾರೆನ್ನುವುದು ಶುದ್ಧಸುಳ್ಳು. ಇದು ಮಾದ್ಯಮಗಳೇ ಸೃಷ್ಟಿ ಮಾಡಿದ ಗಾಳಿ ಸುದ್ದಿ. ನಮ್ಮ ತಂದೆ ಎಂದಿಗೂ ಕಾಂಗ್ರೆಸ್ ತೊರೆಯಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಸ್ಪಷ್ಟಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರದ್ದೋ ಜೊತೆ ಮಾತನಾಡಿದರೆ, ಊಟ ಮಾಡಿದ ತಕ್ಷಣ ಅವರ ಪಕ್ಷ ಸೇರುತ್ತಾರೆ ಅನ್ನೋದು ತಪ್ಪು. ಶಾಮನೂರು ಶಿವಶಂಕರಪ್ಪ ಕಾಂಗ್ರೆಸ್ ನ ಶಿಸ್ತಿನ ಸಿಪಾಯಿ. ಕೊನೆವರೆಗೂ ಕಾಂಗ್ರೆಸ್ ತೊರೆಯಲ್ಲ ಎಂದ ಅವರು, ಲಿಂಗಾಯತ ಸ್ವತಂತ್ರ ಧರ್ಮದ ಸ್ಥಾನಮಾನಕ್ಕೆ ಮಾ. 14ರ ಸಂಪುಟ ಸಭೆಯಲ್ಲಿ ನಿರ್ಧರಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದು, ಈ ಹಿಂದೆ ಕೇಂದ್ರಕ್ಕೆ ಹೋಗಿ ವಾಪಾಸ್ಸು ಬಂದ ನಿದರ್ಶನವಿದೆ ಬಂದಿದೆ ಎಂದರು. 

ಲಿಂಗಾಯತಕ್ಕೆ ಸ್ವತಂತ್ರ ಧರ್ಮಕ್ಕೆ ಸಂಬಂಧಿಸಿದಂತೆ ನ್ಯಾ.ನಾಗಮೋಹನ ದಾಸ್ ಸಮಿತಿ ವರದಿಯನ್ನು ಸಂಪುಟ ಸಭೆಯಲ್ಲಿ ಅಂಗೀಕರಿಸಿ, ಶಿಫಾರಸ್ಸಿಗೂ ಮುನ್ನ ಕಾನೂನು ತಜ್ಞರ ಅಭಿಪ್ರಾಯವನ್ನೂ ಪಡೆಯಲಾಗುತ್ತದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News