ಮಾ.15 ರಂದು ರಾಷ್ಟ್ರೀಯ ವಿಚಾರ ಸಂಕಿರಣ
Update: 2018-03-12 23:56 IST
ಬೆಂಗಳೂರು, ಮಾ.12: ಸೌತ್ ಈಸ್ಟ್ ಏಷಿಯನ್ ಎಜುಕೇಷನ್ ಟ್ರಸ್ಟ್ ಹಾಗೂ ಎಸ್‌ಇಎ ವಿಜ್ಞಾನ, ವಾಣಿಜ್ಯ, ಕಲಾ ಕಾಲೇಜು ವತಿಯಿಂದ ಮಾ.15 ರಂದು ರಾಷ್ಟ್ರೀಯ ವಿಚಾರ ಸಂಕಿರಣವನ್ನು ಎಸ್‌ಇಎ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬೆಳಗ್ಗೆ 10ಕ್ಕೆ ಆಯೋಜಿಸಲಾಗಿದೆ ಎಂದು ಎಸ್‌ಇಎ ಗ್ರೂಪ್ ನಿರ್ದೇಶಕ ಡಾ.ಕೆ. ವಿಯಣ್ಣ ರಾವ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭೌತಿಕ, ‘ನೈಸರ್ಗಿಕ ಮತ್ತು ಮಾಹಿತಿ ವಿಜ್ಞಾನದಲ್ಲಿ ಉದಯೋನ್ಮುಖ ಪ್ರವೃತ್ತಿಗಳು’ ವಿಷಯದ ಕುರಿತು ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ರೆಡ್ಡಿಯವರು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಎಸ್‌ಇಎ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ ಅಧ್ಯಕ್ಷೆ ಮಂಜುಳ ಕೃಷ್ಣಪ್ಪ, ಎಸ್‌ಇಎ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ ಕಾರ್ಯದರ್ಶಿ ಡಿ.ಟಿ.ಶ್ರೀನಿವಾಸ್ ಹಾಗೂ ಕೆ.ಪೂರ್ಣಿಮಾ ಶ್ರೀನಿವಾಸ್ ಭಾಗವಹಿಸಲಿದ್ದಾರೆ ಎಂದು ಹೇಳಿದರು.