×
Ad

ಬೆಂಗಳೂರು: ಮನೆಗೆ ನುಗ್ಗಿ ಕಳವು

Update: 2018-03-12 23:57 IST

ಬೆಂಗಳೂರು, ಮಾ. 12: ಮನೆಯೊಂದರ ಬೀಗ ಮುರಿದು ಒಳನುಗ್ಗಿರುವ ದುಷ್ಕರ್ಮಿಗಳು 2.5 ಲಕ್ಷ ನಗದು, 93 ಗ್ರಾಂ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿರುವ ಘಟನೆ ಇಲ್ಲಿನ ಹನುಮಂತನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಗರದ ಬಿಎಸ್‌ಕೆ ಮೊದಲನೆ ಹಂತದಲ್ಲಿರುವ ಇಂಜಿನಿಯರ್ ಚಂದ್ರ ಎಂಬುವರ ಮನೆಗೆ ನುಗ್ಗಿರುವ ದುಷ್ಕರ್ಮಿಗಳು ಮನೆಯಲ್ಲಿನ ವಸ್ತುಗಳನ್ನೆಲ್ಲಾ ಚೆಲ್ಲಾಪಿಲ್ಲಿ ಮಾಡಿ 2.5 ಲಕ್ಷ ನಗದು, ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ಚಂದ್ರ ಅವರು ನೀಡಿರುವ ದೂರು ದಾಖಲಿಸಿಕೊಂಡಿರುವ ಹನುಮಂತನಗರ ಪೊಲೀಸರು, ದುಷ್ಕರ್ಮಿಗಳಿಗಾಗಿ ಶೋಧ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News