ಫಾದರ್ ಮುಲ್ಲರ್ ಒಳಾಂಗಣ ಕ್ರೀಡಾಂಗಣ, ಜಿಮ್ನಾಶಿಯಂ ಉದ್ಘಾಟನೆ

Update: 2018-03-13 08:13 GMT

ಮಂಗಳೂರು, ಫೆ.13: ಫಾದರ್ ಮುಲ್ಲರ್ ಸಂಸ್ಥೆಯಲ್ಲಿ ನೂತನವಾಗಿ 50 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಒಳಾಂಗಣ ಕ್ರೀಡಾಂಗಣ,ಜಿಮ್ನಾಶಿಯಂ ಮತ್ತು ಬಹು ಅಂತಸ್ತಿನ ಪಾರ್ಕಿಂಗ್ ವಲಯ ದ ಉದ್ಘಾಟನೆಯನ್ನು ರಾಜ್ಯ ಮೀನುಗಾರಿಕೆ, ಬಂದರು ಮತ್ತು ಯುವಜನ ಸೇವಾ ಸಚಿವ ಪ್ರಮೋದ್ ಮಧ್ವರಾಜ್ ಇಂದು ನೆರವೇರಿಸಿದರು.

ಈ ಸಂದರ್ಭ ಮಾತನಾಡಿದ ಅವರು, ವಿಶ್ವದರ್ಜೆಯ ಒಳಾಂಗಣ ಕ್ರೀಡಾಂಗಣ ಇದಾಗಿದ್ದು, ರಾಜ್ಯದಲ್ಲಿ ಇಂತಹ ಸುವ್ಯವಸ್ಥಿತ ಕ್ರೀಡಾಂಗಣವನ್ನು ತಾನು ಎಲ್ಲೂ ನೋಡಿಲ್ಲ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕ್ರೀಡೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟವೂ ಉತ್ತಮವಾಗಿರುತ್ತದೆ. ಕ್ರೀಡೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದವರಿಗೆ ವೈಯಕ್ತಿಕವಾಗಿ ಏಕಲವ್ಯ ಪುರಸ್ಕಾರವನ್ನು ನೀಡಲಾಗುತ್ತದೆ. ಇದೀಗ ರಾಜ್ಯ ಸರಕಾರವು ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ಸಂಸ್ಥೆಗಳಿಗೆ 5 ಲಕ್ಷ ರೂ. ನಗದಿನೊಂದಿಗೆ ಕ್ರೀಡಾ ಪೋತ್ಸಾಹ ಪ್ರಶಸ್ತಿಯನ್ನು ನೀಡುತ್ತಿದೆ ಎಂದು ಅವರು ಹೇಳಿದರು.

ಕ್ರೀಡಾ ವಿದ್ಯಾರ್ಥಿಗಳಿಗೆ ಶಿಕ್ಷಣ ಸಂಸ್ಥೆಗಳು ಪ್ರೋತ್ಸಾಹ ನೀಡುವ ಮೂಲಕ ಸಮಾಜಕ್ಕೆ ಉತ್ತಮವಾದ ಕ್ರೀಡಾಪಟುಗಳನ್ನು ನೀಡಲು ಸಾಧ್ಯ. ರಾಜ್ಯ ಸರಕಾರ ಈ ನಿಟ್ಟಿನಲ್ಲಿ ಕ್ರೀಡಾ ನೀತಿಯೊಂದನ್ನು ತರಲು ಉದ್ದೇಶಿಸಿದ್ದು, ಈಗಾಗಲೇ ಕ್ರೀಡಾ ತಜ್ಞರ, ತರಬೇತುದಾರರ ನೇತೃತ್ವದಲ್ಲಿ ಐದಾರು ಸಭೆಗಳನ್ನು ನಡೆಸಿ ಕ್ರೀಡಾ ನೀತಿಯನ್ನು ಸಿದ್ಧಪಡಿಸಲಾಗಿದೆ. ಈ ಕ್ರೀಡಾ ನೀತಿಯಲ್ಲಿ ಕ್ರೀಡಾಪಟುಗಳಿಗೆ ನೌಕರಿ, ಕ್ರೀಡಾ ಮೀಸಲಾತಿ, ಕ್ರೀಡೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಶಾಲೆ, ಕಾಲೇಜಿನಲ್ಲಿ ಗ್ರೇಸ್ ಮಾರ್ಕ್, ಹಾಜರಾತಿ ನೀಡುವಿಕೆ ಎಲ್ಲ ರೀತಿಯ ಸವಲತ್ತುಗಳನ್ನು ನೀಡಲಾಗುತ್ತದೆ ಎಂದು ಅವರು ಹೇಳಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಭಾರತ ಖ್ಯಾತ ಕ್ರೀಡಾಪಟು ‘ಓಟದ ರಾಣಿ’ ಖ್ಯಾತಿಯ ಪಿ.ಟಿ.ಉಷಾ, ಆರೋಗ್ಯ ಕ್ಷೇತ್ರದಲ್ಲಿ ಬಹಳಷ್ಟು ಕೊಡುಗೆಯನ್ನು ನೀಡಿರುವ ಫಾದರ್ ಮುಲ್ಲರ್ ಸಂಸ್ಥೆ ಇದೀಗ ಕ್ರೀಡಾ ಕ್ಷೇತ್ರಕ್ಕೂ ಪ್ರೋತ್ಸಾಹಿಸಲು ಮುಂದಾಗಿರುವುದು ಸಂಸದ ವಿಚಾರ. ಆರೋಗ್ಯವೇ ಭಾಗ್ಯ. ಆರೋಗ್ಯಕ್ಕೆ ಕ್ರೀಡೆಯೂ ಪೂರಕ ಎಂದವರು ಹೇಳಿದರು.

ಅಧ್ಯಕ್ಷತೆಯನ್ನು ಫಾ.ಮುಲ್ಲರ್ ಸೇವಾ ಸಂಸ್ಥೆಗಳ ಅಧ್ಯಕ್ಷ ಅತೀ.ವಂ.ಡಾ. ಅಲೋಶಿಯಸ್ ಪೌಲ್ ಡಿಸೋಜ ವಹಿಸಿದ್ದರು. ಾದರ್ ಮುಲ್ಲರ್ ಸಂಸ್ಥೆಗಳ ನಿರ್ದೇಶಕ ರೆ.ಾ. ರಿಚರ್ಡ್ ಅಲೋಶಿಯಸ್ ಕುವೆಲ್ಲೋ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಸಂಸ್ಥೆಯ ಆಡಳಿತಾಧಿಕಾರಿ ರೆ.ಾ.ಅಜಿತ್ ಬಿ ಮಿನೇಜಸ್ ಒಳಾಂಗಣ ಕ್ರೀಡಾಂಗಣಕ್ಕೆ ಸಹಕಾರ ನೀಡಿದವರನ್ನು ಸ್ಮರಿಸಿದರು. ಸಂಸ್ಥೆಯ ಆಡಳಿತಾಧಿಕಾರಿ ರೆ.ಾ. ರುಡೋಲ್ಪ್ ರವಿ ಡೇಸಾ ವಂದಿಸಿದರು. ಕಾರ್ಯಕ್ರಮಕ್ಕೂ ಮೊದಲು ಧಾರ್ಮಿಕ ಕಾರ್ಯಕ್ರಮವನ್ನು ಬಿಷಪ್ ನಾನಾ ಧರ್ಮಗುರುಗಳ ಜತೆಯಲ್ಲಿ ನೆರವೇರಿಸಿದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News