ಕುಂಪಲ: ಬೈಕ್ ಢಿಕ್ಕಿ; ಪಾದಚಾರಿಗೆ ಗಂಭೀರ ಗಾಯ

Update: 2018-03-13 10:20 GMT

ಉಳ್ಳಾಲ, ಮಾ.13: ಬೈಕ್ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ವೃದ್ಧರೊಬ್ಬರು ಗಂಭೀರ ಗಾಯಗೊಂಡ ಘಟನೆ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಕುಂಪಲ ಬೈಪಾಸ್ ಇಂದು ಮಧ್ಯಾಹ್ನ ನಡೆದಿದೆ.

ಅಪಘಾತದ ರಭಸಕ್ಕೆ ರಸ್ತೆಗೆಸೆಯಲ್ಪಟ್ಟ ಪಾದಚಾರಿ ಗಂಭೀರ ಗಾಯಗೊಂಡಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದ ಅವರನ್ನು ಸ್ಥಳೀಯರು ತಕ್ಷಣ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತದಲ್ಲಿ ಬೈಕ್ ಸವಾರನಿಗೂ ಗಾಯಗಳಾಗಿದ್ದು, ಆತನು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಗಾಯಾಳುಗಳ ಬಗ್ಗೆ ಹೆಚ್ಚಿನ ವಿವರ ಇನ್ನಷ್ಟೇ ತಿಳಿದುಬರಬೇಕಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News