ಕಾಂಗ್ರೆಸ್ ದ.ಕ. ಜಿಲ್ಲಾ ಪ್ರ.ಕಾರ್ಯದರ್ಶಿ ಹುದ್ದೆಯಿಂದ ಅಬ್ದುಲ್ ಸತ್ತಾರ್ ವಜಾ

Update: 2018-03-13 17:58 GMT

ಮಂಗಳೂರು, ಮಾ. 13: ಮಹಿಳಾ ಕಾರ್ಪೊರೇಟ್‌ರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆಂಬ ಆರೋಪದಲ್ಲಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಅಬ್ದುಲ್ ಸತ್ತಾರ್ ಅವರನ್ನು ವಜಾ ಮಾಡಲಾಗಿದೆ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ. ಹರೀಶ್ ಕುಮಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಸುರತ್ಕಲ್‌ನ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ನಡೆದ ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ ಅಬ್ದುಲ್ ಸತ್ತಾರ್ ಮತ್ತು ಕಾರ್ಪೊರೇಟರ್ ಪ್ರತಿಭಾ ಕುಳಾಯಿ ಅವರಿಗೆ ಮಾತಿನ ಚಕಮಕಿ ನಡೆದಿದೆ ಎಂದು ಹೇಳಲಾಗಿದೆ. ಈ ಸಂದರ್ಭ ಪ್ರತಿಭಾ ಕುಳಾಯಿ ಅವರು ಅಬ್ದುಲ್ ಸತ್ತಾರ್ ಅವರಿಗೆ ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಪ್ರತಿಭಾ ಕುಳಾಯಿ ಅವರನ್ನು ಪತ್ರಿಕೆ ಸಂಪರ್ಕಿಸಿದರೂ ಅವರು ಸಂರ್ಪಕಕ್ಕೆ ಸಿಗುತ್ತಿಲ್ಲ.

ಹಲ್ಲೆ ನಡೆಸಿಲ್ಲ: ಸತ್ತಾರ್
ಸೋಮವಾರ ಬೆಳಗ್ಗೆ ಸುರತ್ಕಲ್‌ನ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಪದಾಧಿಕಾರಿಗಳ ಸಭೆ ನಡೆದಿತ್ತು. ಸಭೆಯಲ್ಲಿ ಕಾರ್ಪೊರೇಟರ್ ಅವರೂ ಕೂಡ ಉಪಸ್ಥಿತರಿದ್ದರು. ವಿಷಯವೊಂದಕ್ಕೆ ಸಂಬಂಧಿಸಿ ನಡೆದ ಚರ್ಚೆಯಲ್ಲಿ ಮಾತಿನ ಚಕಮಕಿಯಾಗಿದೆ. ಆದರೆ, ಪ್ರತಿಭಾ ಕುಳಾಯಿ ಅವರು ನನ್ನ ಮೇಲೆ ಹಲ್ಲೆ ನಡೆಸಿಲ್ಲ ಎಂದು ಅಬ್ದುಲ್ ಸತ್ತಾರ್ ‘ವಾರ್ತಾಭಾರತಿ’ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಪ್ರತಿಭಾ ಕುಳಾಯಿಗೆ ನೋಟಿಸ್
ಪಕ್ಷದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಯು.ಬಿ.ವೆಂಕಟೇಶ್ ಅವರು, ಘಟನೆಗೆ ಸಂಬಂಧಿಸಿ ವಿವರಣೆ ಕೇಳಿ ಕಾರ್ಪೊರೇಟರ್ ಪ್ರತಿಭಾ ಕುಳಾಯಿ ಅವರಿಗೆ ನೋಟಿಸ್ ಜಾರಿಗೊಳಿಸಲಾಗಿದೆ ಎಂದರು.
ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ. ಹರೀಶ್ ಕುಮಾರ್ ಮಾತನಾಡಿ, ಅನುಚಿತ ವರ್ತನೆಯ ಬಗ್ಗೆ ಮಾಧ್ಯಮ ಮೂಲಕ ತಿಳಿದುಕೊಂಡಿದ್ದೇವೆ. ಅಬ್ದುಲ್ ಸತ್ತಾರ್ ಅವರನ್ನು ಪಕ್ಷದ ಹುದ್ದೆಯಿಂದ ವಜಾಗೊಳಿಸಿ ಸೂಕ್ತ ಕ್ರಮ ಕೈಗೊಂಡಿದ್ದೇವೆ ಎಂದರು.

ಕಾರ್ಪೊರೇಟರ್ ಪ್ರತಿಭಾ ಕುಳಾಯಿ ಪಕ್ಷದೊಳಗಿನ ಆಂತರಿಕ ವಿಚಾರವನ್ನು ಮಾಧ್ಯಮಗಳ ಮುಂದೆ ಚರ್ಚಿಸಿ ಪಕ್ಷದ ವರ್ಚಸ್ಸಿಗೆ ಧಕ್ಕೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಉತ್ತರಿಸುವಂತೆ ದ.ಕ. ಜಿಲ್ಲಾ ಕಾಂಗ್ರೆಸ್ ಶೋಕಾಸ್ ನೋಟೀಸು ನೀಡಿದೆ. ಈ ನೋಟೀಸಿಗೆ ಶೀಘ್ರವೇ ಉತ್ತರಿಸುವಂತೆ ಪಕ್ಷ ಸೂಚನೆ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News