ರಂಭಾಪುರ ಶ್ರೀಗಳ ಮನವೊಲಿಕೆ: ಬಸವರಾಜ ರಾಯರೆಡ್ಡಿ

Update: 2018-03-13 13:25 GMT

ಕಲಬುರ್ಗಿ, ಮಾ. 13: ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಅಲ್ಪಸಂಖ್ಯಾತ ಧರ್ಮದ ಸ್ಥಾನಮಾನ ನೀಡುವ ವಿಷಯವಾಗಿ ರಂಭಾಪುರಿ ಶ್ರೀಗಳಿಗೆ ತಪ್ಪುಗ್ರಹಿಕೆ ಇರಬಹುದು, ಅವರ ಮನವೊಲಿಸುತ್ತೇವೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ತಿಳಿಸಿದ್ದಾರೆ.

ಮಂಗಳವಾರ ನಗರದಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ನ್ಯಾ.ನಾಗಮೋಹನ ದಾಸ್ ನೇತೃತ್ವದ ಸಮಿತಿಯ ವರದಿಯ ಬಗ್ಗೆ ಮುಖ್ಯಮಂತ್ರಿ ಅವರು ಕಾನೂನು ಸಲಹೆ ಕೇಳಿದ್ದು, ಬುಧವಾರದ ಸಂಪುಟ ಸಭೆಯಲ್ಲಿ ಈ ವಿಷಯ ಚರ್ಚೆಗೆ ಬರಲಿದೆ. ಬಹುಮತದ ಆಧಾರದ ಮೇಲೆ ಸೂಕ್ತ ತೀರ್ಮಾನವಾಗಲಿದೆ ಎಂದರು.

ಅಲ್ಲಿ ಏನು ನಿರ್ಧಾರ ಹೊರಬರಲಿದೆ ಎಂಬುದನ್ನು ನಾನು ಈಗಲೇ ಹೇಳಲು ಸಾಧ್ಯವಿಲ್ಲ. ‘ಶೈವ’ ಎಂಬ ಪದ ಹಿಂದೂಧರ್ಮದ ಭಾಗ ಎಂಬ ಕಾರಣಕ್ಕೇ ಹಿಂದೆ ಈ ಪ್ರಸ್ತಾವ ತಿರಸ್ಕೃತವಾಗಿದೆ. ವೀರಶೈವ-ಲಿಂಗಾಯತಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡಲು ಕೇಂದ್ರ ಸಮ್ಮತಿಸಿದರೆ, ಆ ಪದ ಬಳಕೆಗೆ ನನ್ನ ವಿರೋಧ ಇಲ್ಲ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News