ಚಂಡಮಾರುತ: ಕೇರಳದಲ್ಲಿ ಕಟ್ಟೆಚ್ಚರ

Update: 2018-03-13 17:29 GMT
 ಸಾಂದರ್ಭಿಕ ಚಿತ್ರ

ತಿರುವನಂತಪುರ, ಮಾ. 13: ದಕ್ಷಿಣ ಕನ್ಯಾಕುಮಾರಿಯಲ್ಲಿ ನಿಮ್ನ ವಾಯು ಭಾರ ಕುಸಿತ ತೀವ್ರಗೊಂಡಿರುವುದರಿಂದ ಮುಂದಿನ ಎರಡು ದಿನಗಳ ಕಾಲ ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಮುಖ್ಯವಾಗಿ ದಕ್ಷಿಣ ಕೇರಳದ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ಮಂಗಳವಾರ ಬೆಳಗ್ಗೆ 8.30ರ ಸುಮಾರಿಗೆ ನಿಮ್ನ ವಾಯು ಭಾರ ಕುಸಿತ ತೀವ್ರಗೊಂಡಿದೆ. ಈ ಹಿನ್ನೆಲೆಯಲ್ಲಿ ಕರಾವಳಿಯಾದ್ಯಂತದ ಮೀನುಗಾರರಿಗೆ ರಾಜ್ಯ ವಿಕೋಪ ನಿರ್ವಹಣಾ ಸಮಿತಿ ಹಾಗೂ ರಾಜ್ಯ ಸರಕಾರ ಮುನ್ನೆಚ್ಚರಿಕೆ ನೀಡಿದೆ. ಮುಂದಿನ 48 ಗಂಟೆಗಳಲ್ಲಿ ಸಮುದ್ರದ ಅಲೆಗಳು 3 ಮೀಟರ್ ಎತ್ತರ ಹಾಗೂ ಗಾಳಿ ಯಾವುದೇ ಕಡೆಯಲ್ಲಿ ಗಂಟೆಗೆ 40-60 ಕಿ.ಮೀ. ವೇಗದಲ್ಲಿ ಬೀಸಲಿದೆ. ಆದುದರಿಂದ ಮೀನುಗಾರರು ಮುನ್ನೆಚ್ಚರಿಕೆ ವಹಿಸುವಂತೆ ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಸುರಕ್ಷಿತವೆಂದು ಘೋಷಿಸುವವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಕ್ರಮಕೈಗೊಳ್ಳಲು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ರಾಜ್ಯಾಡಳಿತಕ್ಕೆ ಆದೇಶ ನೀಡಿದ್ದಾರೆ. ಮೀನುಗಾರರ ರಕ್ಷಣೆಗೆ ತಟ ರಕ್ಷಣಾ ಪಡೆಯ ನೆರವನ್ನೂ ಅವರು ಕೋರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News