ಮಡಿಕೇರಿ: ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮ

Update: 2018-03-13 17:58 GMT

ಮಡಿಕೇರಿ, ಮಾ.13: ಹುಟ್ಟಿನಿಂದ ಸಾಯುವ ತನಕ ಪ್ರತಿಯೊಬ್ಬರಿಗೂ ಕಾನೂನಿನ ಬಗ್ಗೆ ಅರಿವು ಅಗತ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಾಸ್ಟರ್ ಅರ್‍ಕೆಜೆಎಂಎಂ ಮಹಾಸ್ವಾಮೀಜಿ ಅವರು ಹೇಳಿದರು. 

ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. 

ಕಾನೂನಿನ ತಿಳುವಳಿಕೆ ಇಲ್ಲದ ಸಮಾಜವನ್ನು ಊಹಿಸುವುದು ಅಸಾಧ್ಯ. ಆದರೂ ಕಾನೂನಿನ ಬಗ್ಗೆ ಜ್ಞಾನವಿದ್ದರೂ ಸಹ ಸಮಾಜದಲ್ಲಿ ಹಲವು ರೀತಿಯ ಸಮಸ್ಯೆಗಳು ಎದುರಾಗುತ್ತವೆ. ಆದ್ದರಿಂದ ಕಾನೂನಿನ ಬಗ್ಗೆ ಹೆಚ್ಚಿನ ಅರಿವು ಹೊಂದಬೇಕು ಎಂದರು. 

ಕಾನೂನು, ಶಿಕ್ಷಣ, ಆರೋಗ್ಯ ಕಡೆ ವಿಶೇಷ ಗಮನಹರಿಸಬೇಕಿದೆ. ಕಾನೂನು ಸೇವಾ ಪ್ರಾಧಿಕಾರದ ಪ್ರಯೋಜನದ ಬಗ್ಗೆ ಮಾಹಿತಿ ನೀಡಬೇಕಿದೆ ಎಂದು ಜಿಲ್ಲಾ ಸೆಷನ್ ನ್ಯಾಯಾಧೀಶರು ಹೇಳಿದರು.  

ಒಂದನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಡಿ.ಪವನೇಶ್ ಮಾತನಾಡಿ, ಆರೋಗ್ಯವೇ ಭಾಗ್ಯ. ಆರೋಗ್ಯವಿದ್ದಲ್ಲಿ ಚಲನಶೀಲತೆ ಮತ್ತು ಕ್ರೀಯಾಶೀಲತೆಯಿಂದ ಕಾರ್ಯನಿರ್ವಹಿಸಲು ಸಾಧ್ಯ. ಆದ್ದರಿಂದ ಆರೋಗ್ಯದ ಕಡೆ ಗಮನಹರಿಸಬೇಕಿದೆ ಎಂದರು.  

ಜಿಲ್ಲಾ ಏಡ್ಸ್ ನಿಯಂತ್ರಣಾ ಘಟಕದ ಮೇಲ್ವಿಚಾರಕರಾದ ಸುನೀತಾ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷರಾದ ಸಿ.ಟಿ.ಜೋಸೆಫ್, ಅಪರ ಸಿವಿಲ್ ನ್ಯಾಯಾಧೀಶರಾದ ಶರ್ಮಿಳಾ ಕಾಮತ, ನ್ಯಾಯಾಧೀಶರಾದ ಲೋಕೇಶ ಇತರರು ಇದ್ದರು. ಜಯಪ್ಪ ಅವರು ಸ್ವಾಗತಿಸಿ, ನಿರೂಪಿಸಿ, ವಂದಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News