ಸರಕಾರಿ ಜಮೀನು ಒತ್ತುವರಿ ತೆರವುಗೊಳಿಸಲು ಪ್ರತ್ಯೇಕ ಪೀಠ ರಚನೆ: ಬುಧವಾರದಿಂದ ಅರ್ಜಿಗಳ ವಿಚಾರಣೆ ಆರಂಭ

Update: 2018-03-13 17:59 GMT

ಬೆಂಗಳೂರು, ಮಾ.13: ಸರಕಾರಿ ಜಮೀನು ಒತ್ತುವರಿ ತೆರವುಗೊಳಿಸಲು ಹಾಗೂ ಒತ್ತುವರಿದಾರರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಚಿಸಲಾಗಿರುವ ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆಯನ್ನು ಅಸಂವಿಧಾನಿಕವೆಂದು ಘೋಷಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಗೆಂದೆ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪ್ರತ್ಯೇಕ ಪೀಠ ರಚಿಸಲಾಗಿದೆ.

ಕರ್ನಾಟಕ ಭೂಕಬಳಿಕೆ ನಿಷೇಧ ಕಾಯ್ದೆ ಪ್ರಶ್ನಿಸಿ ಸಲ್ಲಿಕೆಯಾಗಿರುವ ನೂರಕ್ಕೂ ಅಧಿಕ ಅರ್ಜಿಗಳ ವಿಚಾರಣೆಗೆ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರನ್ನೊಳಗೊಂಡ ಪೀಠ ರಚನೆ ಮಾಡಲಾಗಿದ್ದು, ಬುಧವಾರ ಈ ಪೀಠದಲ್ಲಿ ಅರ್ಜಿಗಳ ವಿಚಾರಣೆ ಆರಂಭವಾಗಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News