ಶುಹೈಬ್ ಕೊಲೆ ಪ್ರಕರಣ: ಸಿಬಿಐ ತನಿಖೆಗೆ ಹೈಕೋರ್ಟಿನಿಂದ ತಡೆಯಾಜ್ಞೆ

Update: 2018-03-14 10:56 GMT

ಕೊಚ್ಚಿ,ಮಾ. 14: ಕಣ್ಣೂರಿನ ಯುವ ಕಾಂಗ್ರೆಸ್ ನಾಯಕ ಶುಹೈಬ್ ಕೊಲೆ ಪ್ರಕರಣದಲ್ಲಿ ಸಿಬಿಐ ವಿಚಾರಣೆಗೆ ಆದೇಶಿಸಿದ್ದ ಹೈಕೋರ್ಟಿನ ಏಕಸದಸ್ಯ ಪೀಠದ ಆದೇಶಕ್ಕೆ ಹೈಕೋರ್ಟಿನ ವಿಭಾಗೀಯ ಪೀಠ ಇಂದು ತಡೆಯಾಜ್ಞೆ ನೀಡಿದೆ. ತೀರ್ಪಿನ ವಿರುದ್ಧ ಕೇರಳ ಸರಕಾರ ಸಲ್ಲಿಸಿದ ಮೇಲ್ಮನವಿಯನ್ನು ವಿಚಾರಣೆಗೆತ್ತಿಕೊಂಡ ಹೈಕೋರ್ಟಿನ ವಿಭಾಗೀಯ ಪೀಠ ಸಿಬಿಐ ತನಿಖೆಗೆ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.

ಹೈಕೋರ್ಟಿನ ಮುಖ್ಯ ನ್ಯಾಯಾಧೀಶರ ಅಧ್ಯಕ್ಷತೆಯ ವಿಭಾಗೀಯ ಪೀಠ ತಡೆಯಾಜ್ಞೆ ಹೊರಡಿಸಿದ್ದು, ಸರಕಾರದ ಪರ ಕೋರ್ಟಿನಲ್ಲಿ  ಸುಪ್ರೀಂಕೋರ್ಟಿನ ಹಿರಿಯ ವಕೀಲ ಹಾಗೂ ಮಾಜಿ ಸಾಲಿಸಿಟರ್ ಜನರಲ್ ಅಮರೇಂದ್ರ ಶರಣ್ ಹಾಜರಾಗಿದ್ದರು.

 ಪೊಲೀಸರ ತನಿಖೆ ಸರಿಯಾಗಿ ನಡೆಯುತ್ತಿದೆ. ಘಟನೆ ನಡೆದು 22ನೆ ದಿನವಾಗುವಾಗಲೇ  ಏಕ ಸದಸ್ಯ ಪೀಠ ಸಿಬಿಐ ತನಿಖೆಗೆ ಆದೇಶ ಹೊರಡಿಸಿದ್ದು ಸರಿಯಾದ ಕ್ರಮವಲ್ಲ. ಪೊಲೀಸ್ ತನಿಖೆಯಲ್ಲಿ ಯಾವುದೇ ಲೋಪವಾಗಿಲ್ಲ. ಪ್ರಕರಣದಲ್ಲಿ ಹನ್ನೊಂದು ಮಂದಿಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ ಎಂದು ಸರಕಾರ ವಾದಿಸಿತು.

 ಕೊಲೆ ನಡೆದು 48 ಗಂಟೆಗಳಲ್ಲಿ ಆರೋಪಿಗಳ ಪತ್ತೆಗೆ ಪೊಲೀಸರ ವಿಶೇಷ ತನಿಖಾ ತಂಡವನ್ನು ರೂಪಿಸಲಾಯಿತು.  ಫೆಬ್ರವರಿ ಹನ್ನೆರಡರಂದು ಕೊಲೆ ನಡೆದಿದ್ದರೆ ಫೆಬ್ರವರಿ ಹದಿನೆಂಟರಂದು  ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದರು. ನಂತರ ಫೆಬ್ರವರಿ 27ಕ್ಕೆ ಅಸ್ಗರ್, ಮಾರ್ಚ್ ಐದಕ್ಕೆ ಬೈಜು ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದರು. ಈಗಾಗಲೇ ಒಟ್ಟು ಹನ್ನೊಂದು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಸರಕಾರ ವಾದಿಸಿತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News