ಇಂಡಿಗೋ, ಗೋಏರ್ 48 ಹಾರಾಟ ರದ್ದು

Update: 2018-03-14 15:06 GMT

 ಹೊಸದಿಲ್ಲಿ, ಮಾ. 13: ನಾಗರಿಕ ವಿಮಾನ ಯಾನ ನಿರ್ದೇಶನಾಲಯದ ಆದೇಶದಂತೆ ಮೂರನೇ ದಿನವಾದ ಬುಧವಾರ ಇಂಡಿಗೊ ಹಾಗೂ ಗೋಏರ್‌ನ ಹನ್ನೊಂದು 320 ನಿಯೋ ವಿಮಾನಗಳ ಹಾರಾಟವನ್ನು ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಇಂಡಿಗೋ 42 ಯಾನ ಹಾಗೂ ಗೋಏರ್ 8 ಯಾನಗಳನ್ನು ಸ್ಥಗಿತಗೊಳಿಸಿದೆ.

ವಿಮಾನ ಹಾರಾಟ ರದ್ದುಗೊಳಿಸಿರುವುದರಿಂದ ದಿಲ್ಲಿ, ಮುಂಬೈ, ಹೈದರಾಬಾದ್, ಬೆಂಗಳೂರು, ಚೆನ್ನೈ, ಕೋಲ್ಕತ್ತಾ, ಪುಣೆ, ಡೆಹ್ರಾಡೂನ್ ಹಾಗೂ ಶ್ರೀನಗರದ ವಿಮಾನ ಪ್ರಯಾಣಿಕರು ತೊಂದರೆಗೆ ಒಳಗಾಗಿದ್ದಾರೆ ಎಂದು ಇಂಡಿಗೊ ವೆಬ್‌ಸೈಟ್ ಹೇಳಿದೆ. ಇಂಡಿಗೊದ 8 ಹಾಗೂ ಗೋಏರ್‌ನ 3 ವಿಮಾನಗಳ ಹಾರಾಟ ರದ್ದುಗೊಳಿಸಿರುವ ತುರ್ತು ನಿರ್ಧಾರದಿಂದ ವಿಮಾನ ನಿಲ್ದಾಣಗಳಲ್ಲಿ ಗೊಂದಲ ಉಂಟಾಗಿರುವ ಬಗ್ಗೆ ತಜ್ಞರು ನಾಗರಿಕ ವಿಮಾನ ಯಾನ ನಿರ್ದೇಶನಾಲಯವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನಾಗರಿಕ ವಿಮಾನ ಯಾನ ನಿರ್ದೇಶನಾಲಯ ಸೋಮವಾರ ಸಂಜೆ ಇದ್ದಕ್ಕಿದ್ದಂತೆ ನಿರ್ಧಾರ ಘೋಷಿಸಿದ ಬಳಿಕ ಎರಡು ವಿಮಾನ ಯಾನ ಸಂಸ್ಥೆಗಳು ತಮ್ಮ ವಿಮಾನಗಳ ಹಾರಾಟ ರದ್ದುಗೊಳಿಸಿದ್ದವು. ಎಂದು ಹೆಸರು ಹೇಳಲಿಚ್ಛಿಸದ ತಜ್ಞರೊಬ್ಬರು ಹೇಳಿದ್ದಾರೆ. ಪರ್ಯಾಯ ವ್ಯವಸ್ಥೆ ಮಾಡಲು ವಿಮಾನ ಯಾನ ಸಂಸ್ಥೆಗಳಿಗೆ ಕನಿಷ್ಠ ಒಂದು ದಿನ ಕಾಲಾವಕಾಶ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News