ಪಡುಬಿದ್ರಿ: ಸೇತುವೆ ಕಾಮಗಾರಿಗೆ ಶಿಲಾನ್ಯಾಸ

Update: 2018-03-15 13:53 GMT

ಪಡುಬಿದ್ರಿ,ಮಾ.15:  ಕಳೆದ ನಾಲ್ಕೂವರೆ ವರ್ಷಗಳಲ್ಲಿ ಕಾಪು ಕ್ಷೇತ್ರಕ್ಕೆ ರೂ. 1700 ಕೋಟಿ ಅನುದಾನ ಮಂಜೂರಾಗಿದ್ದು, ಕಿಂಡಿ ಅಣೆಕಟ್ಟು ಸೇರಿದಂತೆ 25 ಸೇತುವೆ ಮತ್ತು 23 ಕೆರೆಗಳು ಅಲ್ಲದೆ ಮೂಲಸೌಕರ್ಯಗಳ ಅಭಿವೃದ್ಧಿ ಮಾಡಲಾಗಿದೆ ಎಂದು ಎಂದು ಶಾಸಕ ವಿನಯಕುಮಾರ್ ಸೊರಕೆ ಹೇಳಿದರು.

ಬೀಡಿನಕರೆ ಬಳಿಯಿಂದ ಪಡುಹಿತ್ಲು ಜಾರಂದಾಯ ದೈವಸ್ಥಾನವನ್ನು ಸಂಪರ್ಕಿಸಲು ಕಾಮಿನಿ ಹೊಳೆಗೆ ಅಡ್ಡಲಾಗಿ ರೂ.1.50 ಕೋಟಿ ವೆಚ್ಚದಲ್ಲಿ ನಿರ್ಮಿಸಲಿರುವ ಸೇತುವೆ ಕಾಮಗಾರಿಗೆ ಗುರುವಾರ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.

ಕಾಪು ಕ್ಷೇತ್ರದಲ್ಲಿ ಈ ವರ್ಷದಲ್ಲಿ 9 ಸೇತುವೆ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಈ ಸೇತುವೆ ನಿರ್ಮಾಣಕ್ಕೆ 1.50 ಕೋಟಿ ಮಂಜೂರಾಗಿದ್ದು, ಅಲ್ಪಾವಧಿ ಟೆಂಡರ್ ಆಹ್ವಾನಿಸಿ ಶೀಘ್ರ ಕಾಮಗಾರಿ ನಡೆಸಲಾಗುವುದು. ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಲ್ಲಿ 49 ಕೋಟಿ ವೆಚ್ಚದ ಕಾಮಗಾರಿ ನಡೆದಿದೆ. ಕಾಮಿನಿ ಹೊಳೆತ್ತಲು ಅನುದಾನ ಜೋಡಣೆ ಮಾಡಲು ಪ್ರಯತ್ನಿಸಲಾಗುವುದು. ಕಳೆದ ನಾಲ್ಕೂವರೆ ವರ್ಷಗಳಲ್ಲಿ ಕಾಪು ಕ್ಷೇತ್ರದಲ್ಲಿ 80 ಶೇಕಡಾ ಅಭಿವೃದ್ಧಿ ಕೆಲಸಗಳಾಗಿವೆ ಎಂದರು. 

ರೂ. 1.5 ಕೋಟಿ ಯೋಜನೆ: ಪಿಡ್ಲ್ಯುಡಿ ಕಾರ್ಯನಿರ್ವಾಹಕ ಎಂಜಿನಿಯರ್ ಡಿ.ವಿ.ಹೆಗ್ಡೆ,  ಸುಮಾರು ರೂ. 3 ಕೋಟಿ ವೆಚ್ಚದಲ್ಲಿ ಸೇತುವೆ ಹಾಗೂ ಸಂಪರ್ಕ ರಸ್ತೆ ನಿರ್ಮಾಣವಾಗಲಿದೆ. ರೂ. 1.50 ಕೋಟಿ ಅನುದಾನ ಮಂಜೂರಾಗಿದೆ. ಪ್ರಸ್ತಾವಿತ ಯೋಜನೆಯಲ್ಲಿ 50 ಮೀಟರ್ ಉದ್ದ, 7.5 ಮೀಟರ್ ಅಗಲದ ಸೇತುವೆ ಹಾಗೂ ಅದನ್ನು ಸಂಪರ್ಕಿಸಲು ಒಂದು ಕಿ.ಮೀ. ರಸ್ತೆ ನಿರ್ಮಾಣವಾಗಲಿದೆ ಎಂದರು. 

ತಾಲ್ಲೂಕು ಪಂಚಾಯತ್ ಸದಸ್ಯ ದಿನೇಶ್ ಕೋಟ್ಯಾನ್, ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷೆ ದಮಯಂತಿ ಅಮೀನ್, ಉಪಾಧ್ಯಕ್ಷ ವೈ. ಸುಕುಮಾರ್, ಸದಸ್ಯರಾದ ಕರುಣಾಕರ ಪೂಜಾರಿ, ಮಹೇಂದ್ರ ಪೂಜಾರಿ, ಶಶಿಕಲಾ, ಅಶೋಕ್ ಸಾಲ್ಯಾನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನಚಂದ್ರ ಜೆ ಶೆಟ್ಟಿ ಸ್ಥಳೀಯ ಮುಖಂಡರಾದ ಪ್ರಕಾಶ್ ಶೆಟ್ಟಿ, ಗುತ್ತಿನಾರ್ ಸುಧಾಕರ ಶೆಟ್ಟಿಪಾಲ್, ಸುಧಾಕರ ಪೂಜಾರಿ, ರೋಹಿತ್ ಸುವರ್ಣ, ಜಯತೀರ್ಥ ಆಚಾರ್ಯ, ಅಬ್ದುಲ್ ರಹಿಮಾನ್ ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News