×
Ad

ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ನ ಹಂಗಾಮಿ ಅಧ್ಯಕ್ಷರಾಗಿ ದೀಪಕ್ ಪೂಜಾರಿ ನೇಮಕ

Update: 2018-03-15 23:45 IST

ಮಂಗಳೂರು,ಮಾ.15: ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಸುರತ್ಕಲ್ ಬ್ಲಾಕಿನ ಹಂಗಾಮಿ ಅಧ್ಯಕ್ಷರಾಗಿ ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾಗಿರುವ ದೀಪಕ್ ಪೂಜಾರಿಯವರನ್ನು ಜಿಲ್ಲಾ ಅಧ್ಯಕ್ಷರಾದ ಹರೀಶ್ ಕುಮಾರ್ ರವರು ಆದೇಶ ಹೊರಡಿಸಿರುತ್ತಾರೆ . 

ಆದೇಶವನ್ನು ದಕ್ಷಿಣ ಕನ್ನಡ ಉಸ್ತುವಾರಿ ಸಚಿವರಾದ ಬಿ ರಮಾನಾಥ್ ರೈ ರವರು ಮಂಗಳೂರು ಕಚೇರಿಯಲ್ಲಿ ಹಸ್ತಾಂತರಿಸಿದರು .

ಈ ಸಂದರ್ಭದಲ್ಲಿ ಮಂಗಳೂರು ಉತ್ತರ ಶಾಸಕರಾದ ಮೊಯ್ದಿನ್ ಬಾವ, ರಾಜ್ಯ ಕೆಪಿಸಿಸಿ ಕಾರ್ಯದರ್ಶಿ ಹಾಗು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ದೇವಿಪ್ರಸಾದ್ ಶೆಟ್ಟಿ ಬೆಳ್ಳಾಪು , ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಭಾಸ್ಕರ್ ಮೊಯ್ಲಿ, ಮಾಜಿ ಮೇಯರ್ ಶಶಿಧರ್ ಹೆಗ್ಡೆ ಹಾಗು ಇತರರು ಉಪಸ್ಥಿತರಿದ್ದರು .

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News