ಬೌದ್ಧ ಧರ್ಮಕ್ಕೆ ಮತಾಂತರ...
Update: 2018-03-15 23:55 IST
ದಲಿತ ಸಂಘರ್ಷ ಸಮಿತಿಯ ಪುತ್ತೂರು ತಾಲೂಕು ಸಂಘಟನಾ ಸಂಚಾಲಕ ಆನಂದ ಮಿತ್ತಬೈಲ್ ನೇತೃತ್ವದಲ್ಲಿ 11 ಮಂದಿ ದಲಿತರು ರವಿವಾರ ಹಿಂದೂ ಧರ್ಮದಿಂದ ಬೌದ್ಧ ಧರ್ಮಕ್ಕೆ ಮತಾಂತರಗೊಂಡಿದ್ದಾರೆ. ಕಡಬ ತಾಲೂಕಿನ ಆಲಂಕಾರು ತೋಟಂತಿಲ ಎಂಬಲ್ಲಿ ಪುಟ್ಟಣ್ಣ ಎಂಬವರು ನೂತನವಾಗಿ ನಿರ್ಮಿಸಿದ ’ಮೈತ್ರಿ ವಿಹಾರ’ ಗೃಹ ಪ್ರವೇಶದ ಸಂದರ್ಭ ಈ ಮತಾಂತರ ನಡೆದಿದೆ. ಗೃಹ ಪ್ರವೇಶ ಕಾರ್ಯಕ್ರಮಕ್ಕೆ ದ.ಕ. ಜಿಲ್ಲಾ ಬೌದ್ಧ ಮಹಾಸಭಾದ ಭಂತೇಜಿ ಮೈಸೂರು ಕೊಳ್ಳೇಗಾಲದ ಜೇತವನ ಬುದ್ಧ ವಿಹಾರದ ಪೂಜ್ಯ ಸುಗತಪಾಲ ಭಂತೇಜಿ ಆಗಮಿಸಿದ್ದರು. ಬುದ್ಧ ಶಾಸನದ ಪ್ರಕಾರ ಬುದ್ಧ ಪೂಜೆ ನೆರವೇರಿಸಿ ಧಮ್ಮೋಪದೇಶ ನೀಡಿದರು.