ಮಂಗಳೂರು : ಗೃಹರಕ್ಷಕಿಯರಿಗೆ ಸನ್ಮಾನ

Update: 2018-03-16 13:44 GMT

ಮಂಗಳೂರು, ಮಾ. 16: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಕಚೇರಿಯಲ್ಲಿ ಮಹಿಳಾ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಗೃಹ ರಕ್ಷಕ ದಳದ ಸಮಾದೇಷ್ಠ ಡಾ.ಮುರಲೀ ಮೋಹನ್ ಚೂಂತಾರು ಅವರು ಗೃಹರಕ್ಷಕಿ ಮಧುಮತಿ ಮತ್ತು ವಾರಿಜ ಕೆ. ಅವರನ್ನು ಸನ್ಮಾನಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಗೃಹರಕ್ಷಕ ದಳದ ಉಪಸಮಾದೇಷ್ಠ ರಮೇಶ್ ಅವರನ್ನು ಸನ್ಮಾನಿಸಲಾಯಿತು. ಸಮಾದೇಷ್ಠ ಡಾ. ಮುರಲೀ ಮೋಹನ್ ಚೂಂತಾರು ಮಾತನಾಡಿದರು. ಮಂಗಳೂರು ಘಟಕದ ಘಟಕಾಧಿಕಾರಿ ಮಾರ್ಕ್‌ಶೇರಾ ಮತ್ತು ಹಿರಿಯ ಗೃಹರಕ್ಷಕ ಸುರೇಶ್ ಶೇಟ್, ಮಂಗಳೂರು ಘಟಕದ ಗೃಹರಕ್ಷಕ ಗೃಹರಕ್ಷಕಿಯರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News