ವಿವಿಧೆಡೆ ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣೆ

Update: 2018-03-16 14:09 GMT

ಮಂಗಳೂರು, ಮಾ.16: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜ್‌ಗಳ ಸಹಯೋಗದೊಂದಿಗೆ ವಿವಿಧೆಡೆ ನಡೆಯಲಿದೆ.

ಮಾ. 17ರಂದು ಪುತ್ತೂರು ತಾಲೂಕಿನ ಪಾಣಾಜೆ, 20ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರಿನ ಕೊಯಿಲ, ಸುಳ್ಯ ತಾಲೂಕಿನ ಬೆಳ್ಳಾರೆ, ಮಂಗಳೂರು ತಾಲೂಕಿನ ಶಿರ್ತಾಡಿ ಹಾಗೂ 21ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿದೆ.

ಶಿಬಿರದ ಸದುಪಯೋಗವನ್ನು ಎಂಡೋಸಲ್ಫಾನ್ ಸಂತ್ರಸ್ತರು ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News