ಮಾ.21: ಅಂಬಿಗರ ಚೌಡಯ್ಯನ ವಚನಗಳ ಕುರಿತ ಉಪನ್ಯಾಸ
Update: 2018-03-16 19:49 IST
ಉಡುಪಿ, ಮಾ.16: ಅಜ್ಜರಕಾಡಿನ ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಕನ್ನಡ ವಿಭಾಗ ಹಾಗೂ ಮಂಗಳೂರು ವಿವಿ ಅಂಬಿಗರ ಚೌಡಯ್ಯನ ಅಧ್ಯಯನ ಪೀಠದ ಸಹಯೋಗದೊಂದಿಗೆ ವಚನ ಚಳುವಳಿ ಮತ್ತು ಅಂಬಿಗರ ಚೌಡಯ್ಯನ ವಚನಗಳ ಪ್ರಸ್ತುತೆಯ ಅನುಸಂಧಾನ ಎಂಬ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಮಾ.21ರಂದು ಬೆಳಗ್ಗೆ 10ಗಂಟೆಗೆ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ.
ಸಂಪನ್ಮೂಲ ವ್ಯಕ್ತಿಯಾಗಿ ಹಿರಿಯಡಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಸಹಪ್ರಾಧ್ಯಾಪಕಿ ಡಾ.ನಿಕೇತನ ಭಾಗವಹಿಸಲಿರುವರು ಎಂದು ಪ್ರಕಟಣೆ ತಿಳಿಸಿದೆ.