ಉಡುಪಿ ಜಿಲ್ಲಾ ಕಾಂಗ್ರೆಸ್ ಕಾನೂನು ಮತ್ತು ಮಾನವ ಹಕ್ಕುಗಳ ವಿಭಾಗದ ಅಧ್ಯಕ್ಷರಾಗಿ ನ್ಯಾಯವಾದಿ ಹರೀಶ್ ಶೆಟ್ಟಿ ನೇಮಕ
Update: 2018-03-16 19:50 IST
ಉಡುಪಿ, ಮಾ.16: ಉಡುಪಿ ಜಿಲ್ಲಾ ಕಾಂಗ್ರೆಸ್ ಕಾನೂನು ಮತ್ತು ಮಾನವ ಹಕ್ಕುಗಳ ವಿಭಾಗದ ಅಧ್ಯಕ್ಷರಾಗಿ ಉಡುಪಿಯ ನ್ಯಾಯವಾದಿ ಹರೀಶ್ ಶೆಟ್ಟಿ ಪಾಂಗಾಳ ಅವರನ್ನು ನೇಮಕ ಮಾಡಲಾಗಿದೆ.
ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್, ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್, ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪ್ ಚಂದ್ರ ಶೆಟ್ಟಿ, ಶಾಸಕರಾದ ವಿನಯಕುಮಾರ್ ಸೊರಕೆ, ಗೋಪಾಲ ಪೂಜಾರಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜನಾರ್ದನ ತೋನ್ಸೆ ಶಿಫಾರಸ್ಸಿನ ಮೇರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿಯ ಕಾನೂನು ಮತ್ತು ಮಾನವ ಹಕ್ಕುಗಳ ವಿಭಾಗದ ಅಧ್ಯಕ್ಷ ಸಿ.ಎಂ.ಧನಂಜಯ್ ಈ ಆಯ್ಕೆ ಮಾಡಿದ್ದಾರೆ.