ಮಣಿಪಾಲ : ಮಾದರಿ ವಸತಿ ಶಾಲೆಗೆ ಸಚಿವರಿಂದ ಶಂಕುಸ್ಥಾಪನೆ
Update: 2018-03-16 20:05 IST
ಮಣಿಪಾಲ, ಮಾ.16: ಮಣಿಪಾಲದಲ್ಲಿ ಮೂರು ಕೋಟಿ 15ಲಕ್ಷ ರೂ. ವೆಚ್ಚದ ಮೆಟ್ರಿಕ್ ನಂತರದ ವೃತ್ತಿ ಪರ ವ್ಯಾಸಂಗ ಮಾಡುವ ಬಾಲಕಿಯರ ವಸತಿ ನಿಲಯದ ಕಟ್ಟಡಕ್ಕೆ ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಇಂದು ಶಂಕುಸ್ಥಾಪನೆ ನೆರವೇರಿಸಿದರು.
ಒಂದೇ ಸಂಕೀರ್ಣದಡಿ ನಡೆಸಲ್ಪಡುವ ಹಾಸ್ಟೆಲ್‌ಗಳಲ್ಲಿ ಒಟ್ಟು 400 ವಿದ್ಯಾರ್ಥಿನಿಯರಿಗೆ ನಿಲ್ಲಲು ಅವಕಾಶವಿದ್ದು, ವಿದ್ಯಾರ್ಥಿನಿಯರಿಗೆ ಅನುಕೂಲ ವಾಗಲಿದೆ ಎಂದ ಸಚಿವರು, ಕಾಮಗಾರಿಯನ್ನು ನಿಗದಿತ ಕಾಲಮಿತಿಯೊಳಗೆ ಉತ್ತಮ ಗುಣಮಟ್ಟದೊಂದಿಗೆ ಕಟ್ಟಲು ಸಂಬಂಧಪಟ್ಟವರಿಗೆ ಸ್ಥಳದಲ್ಲೇ ಸೂಚನೆ ನೀಡಿದರು.
ಒಟ್ಟು 1808.34 ಚದರ ಮೀ. ವಿಸ್ತೀರ್ಣದಲ್ಲಿ ಕಟ್ಟಡ ನಿರ್ಮಾಣಗೊಳ್ಳಲಿದ್ದು, ಎಲ್ಲ ಮೂಲಸೌಕರ್ಯಗಳನ್ನು ಹೊಂದಿರಲಿದೆ. ಕಾರ್ಯಕ್ರಮದಲ್ಲಿ ಜಿಲ್ಲೆಯ ಬಿಸಿಎಂ ಅಧಿಕಾರಿ ಹರೀಶ್ ಗಾಂವ್ಕರ್ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.