ಆನ್‌ಲೈನ್ ಮೂಲಕ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ

Update: 2018-03-16 16:15 GMT

ಬೆಂಗಳೂರು, ಮಾ.16: ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡದಿದ್ದವರು ಆನ್‌ಲೈನ್ ಮೂಲಕ ಚುನಾವಣೆ ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ 30 ದಿನದೊಳಗೆ ಮತದಾರರ ಗುರುತಿನ ಚೀಟಿ ಪಡೆಯಬಹುದಾಗಿದೆ.

ಚುನಾವಣಾ ಆಯೋಗ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಹಾಗೂ ತಿದ್ದುಪಡಿ ಮಾಡಲು ಆಯಾ ವಾರ್ಡ್ ವ್ಯಾಪ್ತಿಯ ಬಿಬಿಎಂಪಿ ಕಚೇರಿಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿತ್ತು. ಆದರೆ, ತಮ್ಮ ದಿನನಿತ್ಯದ ಕೆಲಸದ ನಡುವೆ ಬಹಳಷ್ಟು ಜನರು ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿಲ್ಲ. ಅಂತಹವರು ಇಂಟರ್‌ನೆಟ್‌ನಲ್ಲಿ ಚುನಾವಣಾ ಆಯೋಗದ ವೆಬ್‌ಸೈಟ್ www.ceo.karnataka.kar.nic ಗೆ ಭೇಟಿ ನೀಡಿ ತಮ್ಮ ಹೆಸರು, ಮೊಬೈಲ್ ನಂಬರ್, ಇಮೇಲ್ ಐಡಿ ಹಾಕಿ ಖಾತೆ ತೆರೆಯಬಹುದಾಗಿದೆ.

ನಂತರ ಅಲ್ಲಿ ನಿಮಗೆ ವಿವಿಧ ನಮೂನೆಗಳ ಅರ್ಜಿಗಳು ಗೋಚರಿಸುತ್ತವೆ. ಹೊಸದಾಗಿ ಹೆಸರು ಸೇರ್ಪಡೆ ಮಾಡುವವರು ಅಗತ್ಯ ಮಾಹಿತಿಗಳೊಂದಿಗೆ ಫಾರಂ ನಂ.6ನ್ನು ಭರ್ತಿ ಮಾಡಿ ಮತದಾರರ ಪಟ್ಟಿಗೆ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ. ನಂತರದ 30 ದಿನಗಳೊಳಗೆ ಮತದಾರರ ಗುರುತಿನ ಚೀಟಿ ಪಡೆಯಬಹುದಾಗಿದೆ. ಇನ್ನುಳಿದಂತೆ, ಹೆಸರು ತಿದ್ದುಪಡಿ, ವಿಳಾಸ ಬದಲಾವಣೆ ಮಾಡಲು ಅವಕಾಶವಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News