ಅಮಾಸೆಬೈಲು : ಪತ್ನಿಯ ಕತ್ತು ಕಡಿದು ಕೊಲೆಗೆ ಯತ್ನಿಸಿದ ಪತಿಯ ಬಂಧನ
Update: 2018-03-16 21:45 IST
ಅಮಾಸೆಬೈಲು, ಮಾ.18: ಮಚ್ಚಟ್ಟು ಗ್ರಾಮದ ತೊಂಬಟ್ಟು ಎಂಬಲ್ಲಿ ಮಾ.15ರಂದು ಮಧ್ಯಾಹ್ನ 2ಗಂಟೆ ಸುಮಾರಿಗೆ ಗಂಡ ಹೆಂಡತಿ ಮಧ್ಯೆ ಹಣಕಾಸಿನ ವಿಚಾರದಲ್ಲಿ ಜಗಳ ನಡೆದಿದ್ದು, ಇದೇ ವಿಚಾರದಲ್ಲಿ ಪತಿ ತನ್ನ ಪತ್ನಿಯ ಕತ್ತನ್ನು ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಿರುವ ಬಗ್ಗೆ ವರದಿಯಾಗಿದೆ.
ಗಂಭೀರವಾಗಿ ಗಾಯಗೊಂಡ ತೊಂಬಟ್ಟುವಿನ ಆಶಾ(35) ಎಂಬವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ಪತಿ ಉದಯ ಪೂಜಾರಿ(40) ಎಂಬಾತನನ್ನು ಪೊಲೀಸರು ಇಂದು ಬಂಧಿಸಿ ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾ.28ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಮದ್ಯ ಸೇವನೆಯ ಚಟ ಹೊಂದಿದ್ದ ಉದಯ ಪೂಜಾರಿ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿ ಪತ್ನಿ ಆಶಾ ಜೊತೆ ಜಗಳ ನಡೆಸಿದ್ದು, ಬಳಿಕ ಆಕೆಯನ್ನು ಕೊಲೆ ಮಾಡುವ ಉದ್ದೇಶದಿಂದಲೇ ಕತ್ತಿಯಿಂದ ಕುತ್ತಿಗೆ ಕಡಿದು ತೀವ್ರ ಗಾಯಗೊಳಿಸಿರುವುದಾಗಿ ದೂರಲಾಗಿದೆ. ಈ ಬಗ್ಗೆ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.