×
Ad

ಶಿವಮೊಗ್ಗ: ಕಲ್ಲು ಎತ್ತಿ ಹಾಕಿ, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ವ್ಯಕ್ತಿಯ ಹತ್ಯೆ

Update: 2018-03-16 22:27 IST

ಶಿವಮೊಗ್ಗ, ಮಾ. 16: ತಲೆಯ ಮೇಲೆ ಕಲ್ಲು ಎತ್ತಿ ಹಾಕಿ, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ವ್ಯಕ್ತಿಯೋರ್ವರನ್ನು ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕೆಂದಾಳುಬೈಲು ಗ್ರಾಮದಲ್ಲಿ ನಡೆದಿದೆ. 

ಮೃತ ವ್ಯಕ್ತಿಯ ಹೆಸರು, ವಿಳಾಸ ಸೇರಿದಂತೆ ಇತರೆ ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ. ಮೃತ ವ್ಯಕ್ತಿಗೆ ಸುಮಾರು 30 ವರ್ಷ ವಯಸ್ಸಾಗಿದೆ ಎಂದು ಅಂದಾಜಿಸಲಾಗಿದೆ. ಶವವನ್ನು ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. 

ನಿಗೂಢ: ಈ ಹತ್ಯೆ ಪ್ರಕರಣ ಸಂಪೂರ್ಣ ನಿಗೂಢವಾಗಿದೆ. ವ್ಯಕ್ತಿಯ ಹತ್ಯೆ ನಡೆಸಿದ ನಂತರ ಹಂತಕರು, ಗುರುತು ಸಿಗಬಾರದೆಂಬ ಕಾರಣಕ್ಕೆ ಮುಖಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಈ ಕುರಿತಂತೆ ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ತನಿಖೆಯ ನಂತರವಷ್ಟೆ ಹತ್ಯೆಗೀಡಾದ ವ್ಯಕ್ತಿಯ ವಿವರ, ಕಾರಣ ಗೊತ್ತಾಗಬೇಕಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News