×
Ad

ಕಾರ್ಯಕರ್ತರ ಶ್ರಮದಿಂದ ಬಿಜೆಪಿ ಗೆಲುವು: ಮಹೇಶ್ ಪೆದ್ದೂರ್

Update: 2018-03-16 23:23 IST

ಮಂಡ್ಯ, ಮಾ.16: ಕಾರ್ಯಕರ್ತರ ಸಮರ್ಪಣಾ ಮನೋಭಾವದಿಂದ ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಕರ್ನಾಟಕದಲ್ಲೂ ಅದ್ಭುತ ಗೆಲುವು ಪಡೆಯಲಿದೆ ಎಂದು ಉತ್ತರ ಪ್ರದೇಶದ ರಾಜ್ಯಸಭಾ ಸದಸ್ಯ ಮಹೇಶ್ ಪೆದ್ದೂರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ನಗರದ ಬ್ರಾಹ್ಮಣ ಸಮುದಾಯ ಭವನದಲ್ಲಿ ಶುಕ್ರವಾರ ನಡೆದ ಬಿಜೆಪಿಯ ಮಂಡ್ಯ ವಿಧಾನಸಭಾ ಕ್ಷೇತ್ರದ ಚುನಾವಣಾ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಗೆಲುವಿಗೆ ಶ್ರಮಿಸಲು ಕರೆ ನೀಡಿದರು.

ಈ ಬಾರಿ ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಪಕ್ಷದ ಶಾಸಕರು ಆಯ್ಕೆಯಾಗಿ ವಿಧಾನಸಭೆಗೆ ತೆರಳುತ್ತಾರೆ. ಅದಕ್ಕೆ ಈಗ ಕಾಲ ಪಕ್ವವಾಗಿದೆ. ಪ್ರಧಾನಿ ನರೇಂದ್ರಮೋದಿ ಸರಕಾರದ ಯೋಜನೆಗಳನ್ನು ಮನೆಮನೆಗೆ ಮುಟ್ಟಿಸಬೇಕು ಎಂದು ಅವರು ಕಾರ್ಯಕರ್ತರಿಗೆ ಸಲಹೆ ನೀಡಿದರು.

ಮಾಜಿ ಸಂಸದೆ ತೇಜಸ್ವಿನಿ ರಮೇಶ್, ಮಾಜಿ ಶಾಸಕ ಅಶ್ವಥ್‍ನಾರಾಯಣ್, ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಮಧುಚಂದನ್, ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಪ.ನಾ.ಸುರೇಶ್, ನಗರಾಧ್ಯಕ್ಷ ಅರವಿಂದ್, ಅಭಿವೃದ್ದಿ ಪ್ರಕೋಷ್ಠ ಸಂಚಾಲಕ ಡಾ.ಸದಾನಂದ, ಎಸ್ಸಿ ವಿಭಾಗದ ಅಧ್ಯಕ್ಷ ಕೆಂಪಬೋರಯ್ಯ, ಜಿಲ್ಲಾ ಮಹಿಳಾಧ್ಯಕ್ಷೆ ಅನುರಾಧ ರಘು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಮಲ್ಲಿಕಾರ್ಜುನ್, ಕೆ.ಎಸ್. ವಿಜಯಕುಮಾರ್ ಇತರರು ಸಮಾರಂಭದಲ್ಲಿ ಭಾಗವಹಿಸಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News