ಆಳ್ವಾಸ್ ಕಾಲೇಜಿನ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳಿಗೆ ಹಲ್ಲೆ ಆರೋಪ: ಸಿಎಫ್ ಐ ಖಂಡನೆ

Update: 2018-03-18 11:01 GMT

ಮಂಗಳೂರು, ಮಾ.18: ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ಪಿಯು ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದಿದೆ ಎನ್ನಲಾದ ಹಲ್ಲೆ ಖಂಡನೀಯ ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ತಿಳಿಸಿದೆ.

ಪಿಯು ವಾರ್ಷಿಕ ಪರೀಕ್ಷೆ ಮುಗಿಸಿ ಪಾರ್ಟಿ ಮಾಡುತ್ತಿದ್ದ ವಿದ್ಯಾರ್ಥಿಗಳಿಗೆ ಸಿಬ್ಬಂದಿಗಳಿಂದ ಹಲ್ಲೆ ನಡೆದಿದೆ ಎಂದು ಆರೋಪಿಸಲಾಗಿದೆ. ಈ ನಿಟ್ಟಿನಲ್ಲಿ ಆಳ್ವಾಸ್ ಸಂಸ್ಥೆಯ ವಿರುದ್ಧ  ಕ್ಯಾಂಪಸ್ ಫ್ರಂಟ್  ವಿದ್ಯಾರ್ಥಿಗಳ ಜೊತೆಗೂಡಿ ಹೋರಾಟ ನಡೆಸಲಿದೆ ಎಂದು ಜಿಲ್ಲಾ ಕಾರ್ಯದರ್ಶಿ ಮುಹಮ್ಮದ್ ಸಾದಿಕ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News