ಪೆರೋಲ್ ಕೋರಿ ಶಶಿಕಲಾ ಅರ್ಜಿ ಸಲ್ಲಿಕೆ
Update: 2018-03-19 22:08 IST
ಬೆಂಗಳೂರು, ಮಾ.19: ಪತಿ ಎಂ.ನಟರಾಜನ್ ಅವರ ಆರೋಗ್ಯ ಸ್ಥಿತಿ ಗಂಭೀರ ಕುರಿತು ಪೆರೋಲ್ ಕೋರಿ ತಮಿಳುನಾಡು ಎಐಡಿಎಂಕೆ ಪಕ್ಷದ ನಾಯಕಿ ವಿ.ಕೆ.ಶಶಿಕಲಾ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ.
ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಶಶಿಕಲಾ ಅವರು, ಪತಿಯು ಅನಾರೋಗ್ಯದಿಂದ ಬಳಲುತ್ತಿರುವುದರಿಂದ ಅವರನ್ನು ನೋಡಿಕೊಳ್ಳಲು ಪೆರೋಲ್ ಮೇಲೆ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದ್ದಾರೆಂದು ಜೈಲಿನ ಮೂಲಗಳು ತಿಳಿಸಿವೆ.