ಮೂಡುಬಿದಿರೆ : ರೈತ ಸಂಪರ್ಕ ಕೇಂದ್ರಕ್ಕೆ ಶಂಕುಸ್ಥಾಪನೆ
ಮೂಡುಬಿದಿರೆ,ಮಾ.20: ಇಲ್ಲಿನ ಸ್ವರಾಜ್ಯ ಮೈದಾನದ ಬಳಿ ನಿರ್ಮಾಣವಾಗಲಿರುವ ರೈತ ಸಂಪರ್ಕ ಕೇಂದ್ರ ಕಟ್ಟಡಕ್ಕೆ ಶಾಸಕ ಕೆ.ಅಭಯಚಂದ್ರ ಜೈನ್ ಸೋಮವಾರ ಶಂಕುಸ್ಥಾಪನೆ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು ನಬಾರ್ಡ್ ನೆರವಿನಿಂದ 46 ಲಕ್ಷ ವೆಚ್ಚದಲ್ಲಿ ಸುಸಜ್ಜಿತ ರೈತ ಸಂಪರ್ಕ ಕೇಂದ್ರದ ಕಟ್ಟಡವು ನಿಮಾಣವಾಗಲಿದ್ದು ಇದರಿಂದ ಈ ಭಾಗದ ರೈತರಿಗೆ ಹೆಚ್ಚಿನ ಪ್ರಯೋಜನವಾಗಲಿದೆ ಎಂದರು.
ಪುರಸಭಾಧ್ಯಕ್ಷೆ ಹರಿಣಾಕ್ಷಿ ಎಸ್ ಸುವರ್ಣ, ವಲಯ ರೈತ ಸಂಘದ ಅಧ್ಯಕ್ಷ ಧನಕೀರ್ತಿ ಬಲಿಪ, ಅಕ್ರಮ ಸಕ್ರಮ ಸಮಿತಿಯ ಅಧ್ಯಕ್ಷ ಪಿ.ಕೆ ಥೋಮಸ್, ಕೃಷಿ ವಿವಿಯ ಮಾಜಿ ನಿರ್ದೇಶಕ ಸಂಪತ್ ಸಾಮ್ರಾಜ್ಯ, ಕೃಷಿ ವಿಚಾರ ವಿನಿಮಯ ಕೇಂದ್ರದ ಅಧ್ಯಕ್ಷ ರಾಜವರ್ಮ ಬೈಲಂಗಡಿ, ಪುರಸಭಾ ಸದಸ್ಯರಾದ ಸುರೇಶ್ ಕೋಟ್ಯಾನ್, ಕೊರಗಪ್ಪ, ಕೃಷಿ ಇಲಾಖೆಯ ಉಪನಿರ್ದೇಶಕ ಕೆಂಪೇಗೌಡ, ಪಂಚಾಯತ್‍ರಾಜ್ ಇಲಾಖೆಯ ಕಾರ್ಯ ನಿರ್ವಾಹಕ ಇಂಜಿನಿಯರ್ ಸುಜನ್‍ಚಂದ್ರ ರಾವ್, ಹಿರಿಯ ಅಭಿಯಂತರ ಜಗದೀಪ್, ಕೃಷಿ ಇಲಾಖೆಯ ಅಧಿಕಾರಿ ವಸಂತ ಕುಲಕರ್ಣಿ, ಜಿ.ಪಂ ಇಂಜಿನಿಯರ್ ಜಗದೀಶ್ ಶೇಟ್ ಉಪಸ್ಥಿತರಿದ್ದರು.