×
Ad

ಮಾ. 22ರಂದು ಬಂಟ್ವಾಳ ಸರಕಾರಿ ಕಾಲೇಜಿನಲ್ಲಿ 'ರಾಷ್ಟ್ರೀಯ ವಿಚಾರ ಸಂಕಿರಣ'

Update: 2018-03-20 17:59 IST

ಬಂಟ್ವಾಳ, ಮಾ. 20: ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಮಾ. 22ರಂದು 'ಎಕ್ಸ್ಪಾಂಡಿಂಗ್ ದಿ ಹೊರೈಝನ್ಸ್ ಅಫ್ ನೊಲೆಜ್: ಆ್ಯನ್ ಇಂಟರ್ ಡಿಸಿಪ್ಲಿನರಿ ಅಪ್ರೋಚ್' ಎಂಬ ವಿಷಯದ ಬಗ್ಗೆ ಒಂದು ದಿನದ ರಾಷ್ಟ್ರಮಟ್ಟದ ವಿಚಾರಸಂಕಿರಣ ಕಾಲೇಜಿನ ಆವರಣದಲ್ಲಿರುವ ವಿಶಿಷ್ಟ ಹಸಿರು ಸಭಾಂಗಣದಲ್ಲಿ ನಡೆಯಲಿದೆ.

ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಪ್ರೊ. ಮಹೇಶ್ ರಾವ್ ಅವರು ವಿಚಾರ ಸಂಕಿರಣವನ್ನು ಉದ್ಘಾಟಿಸಲಿದ್ದು, ಪುತ್ತೂರಿನ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಪ್ರೊ. ಝೇವಿಯರ್ ಡಿ ಸೋಜ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯಶಾಸ್ತ್ರ ಸ್ನಾತಕೋತ್ತರ ವಿಭಾಗದ ಪ್ರಾಧ್ಯಾಪಕ ಪ್ರೊ. ಪಿ. ಎಸ್. ಎಡಪಡಿತ್ತಾಯ ಹಾಗೂ ವಿಶ್ರಾಂತ ಇತಿಹಾಸ ಪ್ರಾಧ್ಯಾಪಕ ಪ್ರೊ. ಬಿ. ಸುರೇಂದ್ರ ರಾವ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಗೋಷ್ಠಿಗಳನ್ನು ನಡೆಸುವರು. ಪುತ್ತೂರಿನ ಡಾ. ನರೇಂದ್ರ ರೈ ದೇರ್ಲ, ಉಡುಪಿಯಿಂದ ಡಾ. ದುಗ್ಗಪ್ಪ ಕಜೆಕಾರ್ ಹಾಗೂ ಮಂಜೇಶ್ವರದ ಡಾ. ಸಚೀಂದ್ರನ್, ವಿವಿಧ ಕಾಲೇಜುಗಳ ಉಪನ್ಯಾಸಕರು ಗೋಷ್ಠಿಗಳಲ್ಲಿ ಭಾಗವಹಿಸಿ ಪ್ರಬಂಧ ಮಂಡಿಸಲಿದ್ದಾರೆ ಎಂದು ಪ್ರಾಂಶುಪಾಲ ಡಾ. ಗಿರೀಶ ಭಟ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News