×
Ad

ಕೌಟುಂಬಿಕ ಕಲಹ: ಪತ್ನಿ ಮೇಲೆ ಗಂಭೀರ ಹಲ್ಲೆ ನಡೆಸಿದ ಪತಿ

Update: 2018-03-20 19:07 IST

ಬೆಂಗಳೂರು, ಮಾ.20: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯ ಮೇಲೆ ಪತಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಇಲ್ಲಿನ ಚೋಳೂರು ಪಾಳ್ಯದ ಮಂಜುನಾಥ್ ನಗರದಲ್ಲಿ ಸೋಮವಾರ ರಾತ್ರಿ ನಡೆದಿದೆ.

ಗಂಭೀರವಾಗಿ ಗಾಯಗೊಂಡಿರುವ ವೇದ ಕುಮಾರಿ ವಿಕ್ಟೋರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ. ಇನ್ನು ಕೃತ್ಯವೆಸಗಿದ ಪತಿ ಮಂಜುನಾಥ್ ಎಂಬಾತ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಇಬ್ಬರ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿದಾಗ, ಪತ್ನಿಯ ಕುತ್ತಿಗೆಯನ್ನು ಚಾಕುವಿನಿಂದ ಇರಿದು ಪತಿ ಮಂಜುನಾಥ್ ಮನೆ ಬಾಗಿಲು ಹಾಕಿಕೊಂಡು ಪರಾರಿಯಾಗಿದ್ದಾನೆ. ಗಾಯಗೊಂಡಿದ್ದ ವೇದ ಕುಮಾರಿಗೆ ರಕ್ಷಣೆಗೆ ಕೂಗಿಕೊಂಡಿದ್ದು, ಸ್ಥಳೀಯರು ಧಾವಿಸಿ, ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ ಎಂದು ತಿಳಿದುಬಂದಿದೆ.

ಪ್ರಕರಣ ಸಂಬಂಧ ಕೆ.ಪಿ.ಅಗ್ರಹಾರ ಠಾಣಾ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News