ಕಾಂಗ್ರೆಸ್ ಸೇವಾದಳ ಆರೆಸ್ಸೆಸ್‌ಗಿಂತ ಭಿನ್ನ : ತೆಂಕ ಎರ್ಮಾಳಿನಲ್ಲಿ ರಾಹುಲ್ ಗಾಂಧಿ

Update: 2018-03-20 15:18 GMT

ಪಡುಬಿದ್ರಿ, ಮಾ.20: ಕಾಂಗ್ರೆಸ್ ಪಕ್ಷದ ಸೇವಾದಳವು ಆರೆಸ್ಸೆಸ್‌ಗಿಂತ ಭಿನ್ನವಾಗಿದ್ದು, ಜನರ ಸೇವೆಯೇ ನಮ್ಮ ಮುಖ್ಯ ಉದ್ದೇಶವಾಗಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ತೆಂಕ ಎರ್ಮಾಳಿನಲ್ಲಿ ರಾಜೀವ್ ಗಾಂಧಿ ರಾಜಕೀಯ ತರಬೇತಿ ಕೇಂದ್ರವನ್ನು ಮಂಗಳವಾರ ಉದ್ಘಾಟಿಸಿ ಬಳಿಕ ಸೇವಾದಳದ ಕಾರ್ಯಕರ್ತರನ್ನುದ್ದೇಶಿಸಿ ಅವರು ಮಾತನಾಡುತಿದ್ದರು.

ದೇಶದಲ್ಲಿ ಸೇವಾದಳದ ಚಟುವಟಿಕೆ ಹೆಚ್ಚಾಗಬೇಕು. ಪಕ್ಷದಲ್ಲಿ ಶಿಸ್ತು ಅತಿ ಮುಖ್ಯ. ಈ ನಿಟ್ಟಿನಲ್ಲಿ ರಾಜಕಾರಣಿಗಳಿಗೆ ತರಬೇತಿ ಅಗತ್ಯವಾಗಿದೆ. ದೇಶಾದ್ಯಂತ ಕಾಂಗ್ರೆಸ್ ಬಲವರ್ಧನೆಗೆ ಪ್ರತಿಯೊಬ್ಬರು ಶ್ರಮಿಸಬೇಕು. ಸೇವಾದಳದ ಕಾರ್ಯಕರ್ತರು ಕಾಂಗ್ರೆಸ್‌ನ ಸೈನಿಕರು. ಪಕ್ಷ ಅಧಿಕಾರಕ್ಕೆ ಬರಲು ಹಗಲು ರಾತ್ರಿ ದುಡಿಯಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಪಕ್ಷದ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ, ವೇಣುಗೋಪಾಲ್, ಬಿ.ಕೆ.ಹರಿಪ್ರಸಾದ್, ಡಿ.ಕೆ.ಶಿವಕುಮಾರ್, ಯು.ಟಿ.ಖಾದರ್, ಪ್ರಮೋದ್ ಮಧ್ವರಾಜ್, ವಿನಯ ಕುಮಾರ್ ಸೊರಕೆ, ಅಶೋಕ್ ಕೊಡವೂರು ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News