×
Ad

ಮಾ. 21ರಂದು ಜಿಲ್ಲಾ ಕ್ರೀಡಾಂಗಣಕ್ಕೆ ರಾಹುಲ್ ಗಾಂಧಿಗೆ ನಗರದಲ್ಲಿ ಅದ್ಧೂರಿ ಸ್ವಾಗತ: ಎ. ಮಂಜು

Update: 2018-03-20 22:23 IST

ಹಾಸನ, ಮಾ. 20: ಇಂದು ನಗರಕ್ಕೆ ಎ.ಐ.ಸಿ.ಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಆಗಮಿಸಲಿದ್ದು, ನಗರದಲ್ಲಿ ಅದ್ಧುರಿ ಸ್ವಾಗತದೊಂದಿಗೆ ಬರಮಾಡಿಕೊಳ್ಳುವುದಾಗಿ  ಜಿಲ್ಲಾ ಉಸ್ತುವಾರಿ ಸಚಿವರಾದ ಎ. ಮಂಜು ತಿಳಿಸಿದರು.

ಜಿಲ್ಲಾ ಕ್ರೀಡಾಂಗಣದ ಯುವ ಸಬಲಿಕರಣ ಕ್ರೀಡಾಇಲಾಖೆ ಕಛೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷರಾದ ನಂತರ ಇದೇ ಮೊದಲ ಬಾರಿಗೆ ಜಿಲ್ಲೆಗೆ ಭೇಟಿ ನೀಡುತ್ತಿದ್ದು ಎಐಸಿಸಿ ಅಧ್ಯಕ್ಷರಾದ ನಂತರ ಇದೇ ಮೊದಲ ಬಾರಿಗೆ ಜಿಲ್ಲೆಗೆ ಭೇಟಿ ನೀಡುತ್ತಿದ್ದು, ಬುಧವಾರ ಸಂಜೆ 4.30 ಕ್ಕೆ ಬೇಲೂರಿಗೆ ಆಗಮಿಸುವ ಅವರು 5.30ರ ನಂತರ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಬಹಿರಂಗ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 6 ಗಂಟೆಗೆ ಹಾಸನದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಬೃಹತ್ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳುವರು ಎಂದರು.

ಪ್ರತಿ ತಾಲ್ಲೂಕಿನಿಂದ 10 ಸಾವಿರ ಪಕ್ಷದ ಕಾರ್ಯಕರ್ತರು ಆಗಮಿಸಲಿದ್ದು, ಸಿಎಂ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್, ಸಂಸದ ಮಲ್ಲಿಕಾರ್ಜುನ ಖರ್ಗೆ, ಮುನಿಯಪ್ಪ, ಸಚಿವರಾದ ಡಿ.ಕೆ.ಶಿವಕುಮಾರ್, ಶಾಸಕರುಗಳಾದ ದಿನೇಶ್ ಗುಂಡೂರಾವ್, ಮುಖಂಡರಾದ ಎಸ್.ಆರ್.ಪಾಟೀಲ್, ಸಿ.ಎಂ. ಇಬ್ರಾಹಿಂ ಸೇರಿದಂತೆ ಹಲವು ಮುಖಂಡರು ಭಾಗವಹಿಸಲಿದ್ದಾರೆ ಎಂದು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾರಿಗೆ ತಂದು ಜನಪ್ರಿಯ ಯೋಜನೆಗಳು, ಪಕ್ಷ ಸಂಘಟನೆ ಹಾಗೂ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪರಿಣಾಮಕಾರಿಯಾಗಿ ಮತ ಸೆಳೆಯುವ ಕಾರ್ಯಕ್ರಮವಾಗಿದೆ ಎಂದರು. ಪ್ರಣಾಳಿಕಯಲ್ಲಿ ನೀಡಿದ 160 ಭರವಸೆಗಳಲ್ಲಿ 156 ಭರವಸೆ ಗಳನ್ನು ಈಡೆರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಪಾಲ್ಗೊಳ್ಳುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಎಸ್.ಎಂ. ಆನಂದ್, ಹುಡಾ ಅಧ್ಯಕ್ಷ ಹೆಚ್.ಆರ್. ಕೃಷ್ಣಕುಮಾರ್, ನಿದೇರ್ಶಕರಾದ ಮೋಹನ್ ಕುಮಾರ್, ತಾರಾಚಂದನ್, ಶಂಕರರಾಜು ಇತರರು ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News