ಸೇನಾಪಡೆಗಳ ವಿಶೇಷಾಧಿಕಾರ ಕಾಯ್ದೆ ತಿದ್ದುಪಡಿ ಇಲ್ಲ : ಸರಕಾರ

Update: 2018-03-20 16:53 GMT

ಹೊಸದಿಲ್ಲಿ, ಮಾ.20: ಗಲಭೆಪೀಡಿತ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸಲು ಸೇನಾಪಡೆಗಳಿಗೆ ವಿಶೇಷ ಅಧಿಕಾರ ನೀಡುವ ‘ಸೇನಾಪಡೆಗಳ (ಜಮ್ಮು ಮತ್ತು ಕಾಶ್ಮೀರ) ವಿಶೇಷ ಅಧಿಕಾರ ಕಾಯ್ದೆ ,1990 ಅನ್ನು ಹಿಂಪಡೆಯುವ ಅಥವಾ ತಿದ್ದುಪಡಿ ಮಾಡುವ ಬಗ್ಗೆ ಸರಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಕೇಂದ್ರ ಸಚಿವ ಹಂಸರಾಜ್ ಗಂಗಾರಾಮ್ ಆಹಿರ್ ತಿಳಿಸಿದ್ದಾರೆ.

  ಲೋಕಸಭೆಯಲ್ಲಿ ಲಿಖಿತ ಹೇಳಿಕೆ ನೀಡಿದ ಅವರು, ಆದರೆ ಈ ಕಾಯ್ದೆಯನ್ನು ಕಾರ್ಯಸಮರ್ಥ ಹಾಗೂ ಮಾನವೀಯಗೊಳಿಸಬೇಕೆಂಬ ಸಲಹೆಯನ್ನು ಸರಕಾರ ಪರಿಶೀಲಿಸುತ್ತಿದೆ ಎಂದರು. ಜಮ್ಮು ಮತ್ತು ಕಾಶ್ಮೀರ ಹಾಗೂ ಈಶಾನ್ಯದ ರಾಜ್ಯಗಳಲ್ಲಿ ಸೇನಾಪಡೆಗಳಿಗೆ ನೀಡಿರುವ ವಿಶೇಷಾಧಿಕಾರವನ್ನು ರದ್ದುಗೊಳಿಸಬೇಕು ಎಂಬ ಒತ್ತಾಯ ಸುದೀರ್ಘಾವಧಿಯಿಂದ ಕೇಳಿಬರುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News