ಬೆಂಗಳೂರು: ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಕೌನ್ಸೆಲಿಂಗ್

Update: 2018-03-21 05:52 GMT

ಬೆಂಗಳೂರು,ಮಾ.21:ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪತ್ರಿಕೋದ್ಯಮ ಕಲಿಯುತ್ತಿರುವ ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಹಾಗೂ ಪಾರ್ಸಿ ವಿದ್ಯಾರ್ಥಿಗಳಿಗೆ ಬೆಂಗಳೂರಿನ ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯದ ಕೇಂದ್ರ ಕಚೇರಿಯಲ್ಲಿ ಕೌನ್ಸೆಲಿಂಗ್ ನಡೆಸಲಾಯಿತು.

ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 36 ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಅಕ್ರಂ ಪಾಷಾರವರು ಉಪಸ್ಥಿತರಿದ್ದು, ವಿದ್ಯಾರ್ಥಿಗಳ ಜೊತೆಗೆ ಮಾತುಕತೆ ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News