ಚಿಕ್ಕಮಗಳೂರು: ಇಂದು ರಾಹುಲ್ ಭೇಟಿ

Update: 2018-03-21 07:44 GMT

ಚಿಕ್ಕಮಗಳೂರು, ಮಾ.21: ಎಐಸಿಸಿ ರಾಹುಲ್‍ಗಾಂಧಿ ಬುಧವಾರ ಚಿಕ್ಕಮಗಳೂರು ಜಿಲ್ಲೆಗೆ ಭೇಟಿ ನೀಡಿಲಿದ್ದು, ಬೆಳಗ್ಗೆ ಶೃಂಗೇರಿ ಶಾರದಾಂಬೆ ದರ್ಶನದ ಬಳಿಕ ಮಠದ ಸ್ವಾಮೀಜಿ ಭಾರತೀತೀರ್ಥ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಬಳಿಕ ಮಠದ ಸಂಸ್ಕೃತ ಶಾಲೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಬಾಗವಹಿಸಲಿದ್ದಾರೆ.

ನಂತರ ಶೃಂಗೇರಿ ಪಟ್ಟಣದಲ್ಲಿ ನೂತನಾವಾಗಿ ನಿರ್ಮಿಸಲಾಗಿರುವ ಕಾಂಗ್ರೆಸ್ ಕಚೇರಿಯನ್ನು ಉದ್ಘಾಟಿಸಲಿರುವ ರಾಹುಲ್ ಬಳಿಕ ಹೆಲಿಕಾಪ್ಟರ್ ಮೂಲಕ ಚಿಕ್ಕಮಗಳೂರಿಗೆ ಬರಲಿದ್ದಾರೆ. ಮಧ್ಯಾಹ್ನ ಎರಡು ಗಂಟೆ ನಂತರ ಚಿಕ್ಕಮಗಳೂರು ನಗರದ ಐಡಿಎಸ್‍ಜಿ ಕಾಲೇಜಿನ ಹೆಲಿಪ್ಯಾಡ್‍ನಲ್ಲಿ ಬಂದಿಳಿಯಲಿರುವ ರಾಹುಲ್ ಅಲ್ಲಿಂದ ಸಾವಿರಾರು ಕಾರ್ಯಕರ್ತರೊಂದಿಗೆ ನಗರದ ಹನುಮಂತಪ್ಪ ವೃತ್ತದ ಮೂಲಕ ಎಂಜಿ ರಸ್ತೆಯಲ್ಲಿ ರೋಡ್ ಶೋ ನಡೆಸಲಿದ್ದಾರೆ. ರೋಡ್ ಶೋ ಬಳಿಕ ನಗರದ ಜಿಲ್ಲಾ ಆಟದ ಮೈದಾನದಲ್ಲಿ ಆಯೋಜಿಸಲಾಗಿರುವ ಜನಾಶೀರ್ವಾದ ಸಮಾವೇಶದಲ್ಲಿ ಬೃಹತ್ ಸಂಖ್ಯೆಯಲ್ಲಿ ನೆರೆದಿರುವ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಲಿದ್ದಾರೆ.

ರಾಹುಲ್ ಆಗಮನದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರ ಸೇರಿದಂತೆ ಶೃಂಗೇರಿ, ಜಯಪುರ, ಬಾಳೆಹೊನ್ನೂರು ಪಟ್ಟಣಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಚಿಕ್ಕಮಗಳೂರು ನಗರದಲ್ಲಿ ಪೊಲೀಸ್ ಇಲಾಖೆ ಎಲ್ಲೆಂದರಲ್ಲಿ ವಾಹನ ಸಂಚಾರಕ್ಕೆ ನಿಷೇಧ ಹೇರಿದ್ದು ಟ್ರಾಪಿಕ್ ಸಮಸ್ಯೆ ಪರಿಹಾರಕ್ಕೆ ಸೂಕ್ತ ಕ್ರಮ ವಹಿಸಿದ್ದಾರೆ. ನಗರದಾದ್ಯಂತ ಖಾಕಿ ಸರ್ಪಗಾವಲು ಕಾರ್ಯನಿರ್ವಹಿಸುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News