ಮೀಸಲು ಕ್ಷೇತ್ರಗಳ ಟಿಕೆಟ್ ಹಂಚಿಕೆ: ಅಸ್ಪೃಶ್ಯರಿಗೆ ಆದ್ಯತೆ ನೀಡಲು ದಲಿತ ಸಂಘಟನೆಗಳ ಒಕ್ಕೂಟ ಒತ್ತಾಯ
Update: 2018-03-21 21:16 IST
ಬೆಂಗಳೂರು, ಮಾ. 21: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮೀಸಲು ಕ್ಷೇತ್ರಗಳ ಟಿಕೆಟ್ ಹಂಚಿಕೆಯಲ್ಲಿ ಅಸ್ಪಶ್ಯ ಸಮುದಾಯಗಳಿಗೆ ಆದ್ಯತೆ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು, ನಗರದ ಆನಂದ ರಾವ್ ವೃತ್ತದಲ್ಲಿ ಗಾಂಧಿ ಪ್ರತಿಮೆ ಬಳಿ ಧರಣಿ ಸತ್ಯಾಗ್ರಹ ನಡೆಸಿದರು.
ಬುಧವಾರ ನಡೆದ ಧರಣಿ ಸತ್ಯಾಗ್ರಹದ ನೇತೃತ್ವ ವಹಿಸಿದ್ದ ದಲಿತ ಮುಖಂಡ ಸಿದ್ದಲಿಂಗಯ್ಯ ಮಾತನಾಡಿ, ಮೀಸಲು ಕ್ಷೇತ್ರಗಳಲ್ಲಿ ಸ್ಪಶ್ಯ ಸಮುದಾಯಕ್ಕೆ ಕಾಂಗ್ರೆಸ್, ಬಿಜೆಪಿ ಟಿಕೆಟ್ ನೀಡುತ್ತಿರುವುದು ಮೀಸಲಾತಿಯ ಮೂಲ ಆಶಯ ಹಾಗೂ ಸಂವಿಧಾನಕ್ಕೆ ವಿರುದ್ಧವಾಗಿದೆ. ಆದುದರಿಂದ ಅಸ್ಪಶ್ಯ ಸಮುದಾಯಗಳಿಗೆ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು.
ಮೊಯ್ಲಿ ಕೈಬಿಡಿ: ಲೋಕೋಪಯೋಗಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ವಿರುದ್ಧ ಹಗುರವಾಗಿ ಹೇಳಿಕೆ ನೀಡಿದ ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ಅಧ್ಯಕ್ಷ ವೀರಪ್ಪ ಮೊಯ್ಲಿ ಅವರನ್ನು ಕೈಬಿಡಬೇಕು. ಇಲ್ಲವಾದರೆ ಹೋರಾಟ ರೂಪಿಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.