ಕೊಳ್ಳೇಗಾಲ: ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಕಾರಿಗೆ ಬೆಂಕಿ
Update: 2018-03-21 23:21 IST
ಕೊಳ್ಳೇಗಾಲ,ಮಾ.21: ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಡಿ.ಸಿ ಶೃತಿ ಅವರ ಕಾರಿಗೆ ಮಂಗಳವಾರ ರಾತ್ರಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾಗಿದೆ.
ನಗರದ ಸರ್ಕಾರಿ ಆಸ್ಪತ್ರೆಯ ಮುಂದೆ ನಿಲ್ಲಿಸಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ತಕ್ಷಣ ಚಾಲಕ ಸುರೇಶ್ ಹೊರಬಂದಿದ್ದರಿಂದ ಅನಾಹುತದಿಂದ ಪಾರಾಗಿದ್ದಾನೆ. ಸ್ಥಳಕ್ಕೆ ಅಗ್ನಿ ಶಾಮಕದಳದ ಪೊಲೀಸರು ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.
ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.