ಸೂಪರ್ ಸಾನಿಕ್ ಬ್ರಹ್ಮೋಸ್ ಕ್ರೂಸ್ ಕ್ಷಿಪಣಿಯ ಪರೀಕ್ಷಾರ್ಥ ಉಡಾವಣೆ

Update: 2018-03-22 15:52 GMT

ಪೋಖರಣ್, ಮಾ. 21: ಸೂಪರ್ ಸಾನಿಕ್ (ಶಬ್ದಾತೀತ) ಬ್ರಹ್ಮೋಸ್ ಕ್ರೂಸ್ ಕ್ಷಿಪಣಿಯ ಪರೀಕ್ಷಾರ್ಥ ಉಡಾವಣೆ ರಾಜಸ್ಥಾನದ ಪೋಖರಣ್‌ನ ಪರೀಕ್ಷಾ ವಲಯದಲ್ಲಿ ಗುರುವಾರ ಬೆಳಗ್ಗೆ ಯಶಸ್ವಿಯಾಗಿ ನೆರವೇರಿದೆ. ಯಶಸ್ವಿ ಪರೀಕ್ಷಾರ್ಥ ಉಡಾವಣೆ ಹಿನ್ನೆಲೆಯಲ್ಲಿ ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ)ಯನ್ನು ಟ್ವಿಟ್ಟರ್‌ನಲ್ಲಿ ಅಭಿನಂದಿಸಿರುವ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಇದರಿಂದ ರಾಷ್ಟ್ರದ ಸಾಮರ್ಥ್ಯ ಮತ್ತಷ್ಟು ವೃದ್ಧಿಸಲಿದೆ ಎಂದಿದ್ದಾರೆ. ರಾಜಸ್ಥಾನದ ಪೋಖರಣ್‌ನಲ್ಲಿ ಬೆಳಗ್ಗೆ 8.42ಕ್ಕೆ ಕ್ರೂಸ್ ಕ್ಷಿಪಣಿ ಬ್ರಹ್ಮೋಸ್‌ನ ಪರೀಕ್ಷಾರ್ಥ ಉಡಾವಣೆ ಯಶಸ್ವಿಯಾಗಿ ನೆರವೇರಿತು. ಈ ಬ್ರಹ್ಮೋಸ್ ಕ್ಷಿಪಣಿಯನ್ನು ರಶ್ಯದೊಂದಿಗಿನ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸ ಲಾಗಿದೆ. ಬ್ರಹ್ಮಪುತ್ರ ಹಾಗೂ ಮೋಸ್ಕ್ವಾ ನದಿಯ ಪ್ರೇರಣೆಯ ಹಿನ್ನೆಲೆಯಲ್ಲಿ ಈ ಕ್ಷಿಪಣಿಗೆ ಬ್ರಹ್ಮೋಸ್ ಹೆಸರು ಇರಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News