ರಾಜ್ಯಸಭಾ ಚುನಾವಣೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ: ಸಿ.ಎಂ ಸಿದ್ದರಾಮಯ್ಯ

Update: 2018-03-23 12:25 GMT

ಬೆಂಗಳೂರು, ಮಾ. 23: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಇಂದು ನಡೆದ ಚುನಾವಣೆಯಲ್ಲಿ ನಮ್ಮ ಪಕ್ಷದ ಮೂವರು ಅಭ್ಯರ್ಥಿಗಳು ಗೆಲ್ಲುವುದು ನಿಶ್ಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಭರವಸೆ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ವಿಧಾನಸೌಧದಲ್ಲಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಚುನಾವಣೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ಸೋಲಿನ ಹತಾಶೆಯಿಂದ ಜೆಡಿಎಸ್ ಅಕ್ರಮ ನಡೆದಿದೆ ಎಂದು ಸುಳ್ಳು ಆರೋಪ ಮಾಡುತ್ತಿದೆ ಎಂದು ಟೀಕಿಸಿದರು.

ಸಚಿವ ಕಾಗೋಡು ತಿಮ್ಮಪ್ಪ ಮತ್ತು ಬಾಬುರಾವ್ ಚಿಂಚನಸೂರು ಮತ ಚಲಾಯಿಸುವ ಮೊದಲು ಮತಪತ್ರದಲ್ಲಿ ತಪ್ಪಾಗಿರುವುದು ಅವರ ಅರಿವಿಗೆ ಬಂದಿದೆ. ಹೀಗಾಗಿ ಎರಡನೆ ಮತಪತ್ರ ಪಡೆದಿದ್ದಾರೆ. ಎರಡನೆ ಮತಪತ್ರ ಪಡೆಯಲು ಅವಕಾಶ ಇದೆ. ಇದು ಯಾವುದೇ ಅಕ್ರಮವಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಣೆ ನೀಡಿದರು.

ಕಾಂಗ್ರೆಸ್ ಅಭ್ಯರ್ಥಿ ಮೊದಲ ಪ್ರಾಶಸ್ತ್ಯದ ಮತವನ್ನು ಡಾ.ಎಲ್.ಹನುಮಂತಯ್ಯ, ಎರಡನೆ ಪ್ರಾಶಸ್ತ್ಯದ ಮತವನ್ನು ಜಿ.ಸಿ.ಚಂದ್ರಶೇಖರ್ ಅವರಿಗೆ ಹಾಕಿದ್ದಾರೆ ಎಂದ ಅವರು, ನಮ್ಮ ಪಕ್ಷದ ಮೂವರು ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಇದೇ ವೇಳೆ ನುಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News