ಬೆಂಗಳೂರು: ಅಂಬೇಡ್ಕರ್ ಸ್ಕೂಲ್ ಆಫ್ ಇಕನಾಮಿಕ್ಸ್ ಆಡಳಿತ ಮಂಡಳಿಯ ಪುನರ್ ರಚನೆ

Update: 2018-03-24 16:42 GMT

ಬೆಂಗಳೂರು, ಮಾ.24: ಬೆಂಗಳೂರು ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಇಕನಾಮಿಕ್ಸ್ ಸಂಸ್ಥೆಯ ಆಡಳಿತ ಮಂಡಳಿಯನ್ನು ಪುನರ್ ರಚನೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಭಾರತ ಸರಕಾರದ ಯೋಜನಾ ಆಯೋಗದ ನಿವೃತ್ತ ಉಪಾಧ್ಯಕ್ಷ ಮಾಂಟೆಕ್ ಸಿಂಗ್ ಅಹ್ಲುವಾಲಿಯಾ, ಆಂಧ್ರಪ್ರದೇಶದ ಮಾಜಿ ರಾಜ್ಯಪಾಲ ಹಾಗೂ ಭಾರತೀಯ ರಿಸರ್ವ್ ಬ್ಯಾಂಕ್‌ನ ನಿವೃತ್ತ ಗವರ್ನರ್ ಡಾ.ಸಿ.ರಂಗರಾಜನ್, ಇಸ್ಫೋಸಿಸ್ ಸಂಸ್ಥೆಯ ಅಧ್ಯಕ್ಷೆ ಡಾ.ಸುಧಾಮೂರ್ತಿ. ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದ ನಿವೃತ್ತ ಉಪಕುಲಪತಿ ಪ್ರೊ.ಎಸ್.ಬಿಸಲಯ್ಯ, ಮುಂಬೈ ವಿಶ್ವವಿದ್ಯಾಲಯದ ನಿವೃತ್ತ ಉಪಕುಲಪತಿ ಡಾ.ಬಾಲಚಂದ್ರ ಲಕ್ಷ್ಮಣ್ ಮುಂಗೇಕರ್, ನಿವೃತ್ತ ಐಎಎಸ್ ಅಧಿಕಾರಿ ಎಚ್.ಸಿದ್ದಯ್ಯರನ್ನು ಆಡಳಿತ ಮಂಡಳಿಗೆ ಆಯ್ಕೆ ಮಾಡಲಾಗಿದೆ.

ಇದಲ್ಲದೆ, ಆಡಳಿತ ಮಂಡಳಿಯ ವಿಶೇಷ ಆಹ್ವಾನಿತರನ್ನಾಗಿ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಷಾ, ಹುಬ್ಬಳ್ಳಿಯ ಆಕ್ಸ್‌ಫರ್ಡ್ ಕಾಲೇಜಿನ ಅಧ್ಯಕ್ಷ ವಸಂತ ಹೊರಟ್ಟಿ, ಬೆಂಗಳೂರಿನ ಆರ್.ರಾಮೇಗೌಡರನ್ನು ನೇಮಕ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News