ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಲು ರಾಜ್ಯಸಭಾ ಸದಸ್ಯರಿಗೆ ಮನವಿ

Update: 2018-03-24 16:47 GMT

ಬೆಂಗಳೂರು, ಮಾ.24: ಕರ್ನಾಟಕದಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿರುವ ಡಾ.ಎಲ್.ಹನುಮಂತಯ್ಯ, ಡಾ.ಸೈಯ್ಯದ್ ನಸೀರ್ ಹುಸೇನ್, ಜಿ.ಸಿ.ಚಂದ್ರಶೇಖರ್ ಹಾಗೂ ರಾಜೀವ್‌ಚಂದ್ರಶೇಖರ್‌ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.

ನೂತನವಾಗಿ ರಾಜ್ಯಸಭೆಗೆ ಆಯ್ಕೆಯಾಗಿರುವ ಇವರಿಗೆ ಪ್ರತ್ಯೇಕವಾಗಿ ಪತ್ರ ಬರೆದಿರುವ ಅವರು, ಕನ್ನಡದ ಅಸ್ಮಿತೆಯನ್ನು ಕಾಪಾಡುವಲ್ಲಿ ಹಾಗೂ ಪ್ರಾದೇಶಿಕವಾರು ಕನ್ನಡಿಗರಿಗೆ ಸಿಗಬೇಕಾದ ಸವಲತ್ತುಗಳನ್ನು ನ್ಯಾಯಯುತವಾಗಿ ದೊರಕಿಸಿಕೊಡುವಲ್ಲಿ ಪ್ರಯತ್ನಿಸುತ್ತೀರೆಂದು ನಂಬಿದ್ದೇನೆ ಎಂದು ತಿಳಿಸಿದ್ದಾರೆ.

ತಾವುಗಳು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸುವಾಗ ಕನ್ನಡದಲ್ಲಿಯೆ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಕನ್ನಡಿಗರ ದನಿಯನ್ನು ಸಂಸತ್ತಿನ ಮೇಲ್ಮನೆಯಲ್ಲಿ ಪ್ರತಿನಿಧಿಸಬೇಕೆಂದು ಅತ್ಯಂತ ಕಳಕಳಿಯಿಂದ ಕೋರುತ್ತೇನೆ. ತಮ್ಮ ರಾಜ್ಯಸಭಾ ಸದಸ್ಯತ್ವದ ಸೇವಾ ಅವಧಿಯು ಯಶಸ್ಸಿನಿಂದ ಕೂಡಿರಲಿ ಎಂದು ಪ್ರೊ.ಎಸ್.ಜಿ.ಸಿದ್ದರಾಮಯ್ಯ ಹಾರೈಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News