ಇರಾನ್ ಕಂಪೆನಿ, ವ್ಯಕ್ತಿಗಳ ವಿರುದ್ಧ ಅಮೆರಿಕ ದಿಗ್ಬಂಧನ
Update: 2018-03-24 22:58 IST
ವಾಶಿಂಗ್ಟನ್, ಮಾ. 24: ಇರಾನ್‌ನ ಒಂದು ಕಂಪೆನಿ ಹಾಗೂ ಒಂಬತ್ತು ವ್ಯಕ್ತಿಗಳ ವಿರುದ್ಧ ಅಮೆರಿಕ ಶುಕ್ರವಾರ ದಿಗ್ಬಂಧನಗಳನ್ನು ವಿಧಿಸಿದೆ ಹಾಗೂ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಿದೆ.
ಈ ಕಂಪೆನಿ ಮತ್ತು ವ್ಯಕ್ತಿಗಳು ಅಮೆರಿಕ ಸೇರಿದಂತೆ ಹಲವಾರು ದೇಶಗಳ ನೂರಾರು ವಿಶ್ವವಿದ್ಯಾನಿಲಯಗಳು, ಖಾಸಗಿ ಮತ್ತು ಸರಕಾರಿ ಸಂಸ್ಥೆಗಳು ಹಾಗೂ ವಿಶ್ವಸಂಸ್ಥೆಯ ಕಂಪ್ಯೂಟರ್‌ಗಳಿಗೆ ಕನ್ನ ಹಾಕಿದ್ದಾರೆ ಎಂದು ಅದು ಆರೋಪಿಸಿದೆ.
ಇದು ಅಮೆರಿಕದಲ್ಲಿ ವಿಚಾರಣೆಗೆ ಒಳಪಟ್ಟ ಈವರೆಗಿನ ಅತಿ ದೊಡ್ಡ ಸರಕಾರಿ ಪ್ರಾಯೋಜಿತ ಕನ್ನ ಅಭಿಯಾನವಾಗಿದೆ ಎಂಬುದಾಗಿ ಅಮೆರಿಕದ ಅಧಿಕಾರಿಯೊಬ್ಬರು ಬಣ್ಣಿಸಿದ್ದಾರೆ.