×
Ad

ಭಟ್ಕಳ: ವಿಶ್ವ ಕ್ಷಯ ರೋಗ ನಿವಾರಣೆ ದಿನಾಚರಣೆ

Update: 2018-03-24 23:02 IST

ಭಟ್ಕಳ, ಮಾ. 24: ತಾಲೂಕಾ ಆರೋಗ್ಯ ಇಲಾಖೆ ವತಿಯಿಂದ ವಿಶ್ವ ಕ್ಷಯ ರೋಗ ನಿವಾರಣೆ ದಿನಾಚರಣೆಯನ್ನು ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾ ವಿದ್ಯಾಲಯದ ಸಭಾಂಗಣದಲ್ಲಿ ಶನಿವಾರ ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಆರ್. ನರಸಿಂಹಮೂರ್ತಿ, ಜನರು ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದರ ಮೂಲಕ 2025ರ ಒಳಗಾಗಿ ಜಗತ್ತು ಕ್ಷಯ ರೋಗ ಮುಕ್ತವಾಗಲು ಆರೋಗ್ಯ ಇಲಾಖೆ ಜನಜಾಗೃತಿ ಮೂಡಿಸುತ್ತಿದೆ ಎಂದರು.

ಸಂಪನ್ಮೂಲ ವ್ಯಕ್ತಿಗಳಾದ ತಾಲೂಕಾ ವೈದ್ಯಾಧಿಕಾರಿ ಡಾ. ಮೂರ್ತಿರಾಜ ಭಟ್ ಕ್ಷಯ ರೋಗದ ಲಕ್ಷಣ, ಪರಿಣಾಮ ಮತ್ತು ಅದರ ಪರಿಹಾರದ ಕುರಿತು ಉಪಯುಕ್ತ ಮಾಹಿತಿ ನೀಡಿದರು. ಈರಯ್ಯ ದೇವಾಡಿಗ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. 

ಕಾರ್ಯಕ್ರಮದಲ್ಲಿ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯ ಮತ್ತು ಶ್ರೀ ಗುರುಸುಧೀಂದ್ರ ಮಹಾವಿದ್ಯಾಲಯದ ಉಪನ್ಯಾಸಕರು, ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು. ಪ್ರಶಿಕ್ಷಣಾರ್ಥಿ ಸುಬ್ರಹ್ಮಣ್ಯ ಸರ್ವರನ್ನು ವಂದಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News