×
Ad

ಬೆಂಗಳೂರು: ಫ್ಲೆಕ್ಸ್ ಕಟ್ಟುವ ವಿಚಾರಕ್ಕೆ ಜಗಳ; ಯುವಕನ ಕೊಲೆ

Update: 2018-03-27 20:02 IST

ಬೆಂಗಳೂರು,ಮಾ.27: ನಗರದ ಹೊರವಲಯದ ನೆಲಮಂಗಲದಲ್ಲಿ ಫ್ಲೆಕ್ಸ್ ಕಟ್ಟುವ ವಿಚಾರಕ್ಕೆ ಯುವಕರ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿರುವ ದುರ್ಘಟನೆ ನಡೆದಿದೆ.

ಇಲ್ಲಿನ ಗೊಲ್ಲಹಳ್ಳಿ ಗೇಟ್‌ನ ಮಾರುತಿ ಬಡಾವಣೆಯ ಮಾರುತಿ(25) ಕೊಲೆಯಾದ ಯುವಕನಾಗಿದ್ದು, ಗೊಲ್ಲಹಳ್ಳಿಯಲ್ಲಿ ಬಯಲಾಂಜನೇಯ ಸ್ವಾಮಿಯ ಜಾತ್ರೆಯ ಅಂಗವಾಗಿ ರಥೋತ್ಸವ ಹಮ್ಮಿಕೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ಸಿದ್ಧತೆಯಲ್ಲಿ ತೊಡಗಿದ್ದ ಸಂದರ್ಭದಲ್ಲಿ ಫ್ಲೆಕ್ಸ್ ಕಟ್ಟುವ ವಿಚಾರದಲ್ಲಿ ಎರಡು ಯುವಕರ ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಅಲ್ಲಿನ ಗಲಾಟೆ ತಾರಕಕ್ಕೇರಿ ಮಾರುತಿಗೆ ಚಾಕುವಿನಿಂದ ಇರಿಯಲಾಗಿದೆ. ಸ್ಥಳದಲ್ಲೇ ಅಸ್ವಸ್ಥನಾದ ಆತನನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದರೂ, ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಮಾರುತಿ ಜೊತೆಯಲ್ಲಿದ್ದ ಶಶಿಕುಮಾರ್ ಎಂಬ ಯುವಕನ ಮೇಲೂ ಹಲ್ಲೆ ನಡೆದಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆತ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಈ ದುರ್ಘಟನೆಯ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News