×
Ad

ಬಿಜೆಪಿ ವಕ್ತಾರ ಎನ್.ಆರ್.ರಮೇಶ್ ಆರೋಪ ಸುಳ್ಳು: ಬಿ.ಭೀಮಪ್ಪ

Update: 2018-03-27 21:28 IST

ಬೆಂಗಳೂರು, ಮಾ.27: ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಕಾಮಗಾರಿಗಳ ಟೆಂಡರ್ ನೀಡುವಲ್ಲಿ ಶೇ.20ರಷ್ಟು ಹೆಚ್ಚುವರಿಯಾಗಿ ನೀಡಲಾಗುತ್ತಿದೆ ಎಂದು ಬಿಜೆಪಿ ನಾಯಕ ಎನ್.ಆರ್.ರಮೇಶ್ ಮಾಡಿರುವ ಆರೋಪದಲ್ಲಿ ಯಾವುದೆ ಸತ್ಯಾಂಶವಿಲ್ಲವೆಂದು ಮಂಡಳಿಯ ಆಯುಕ್ತ ಬಿ.ಭೀಮಪ್ಪ ಸಮರ್ಥನೆ ನೀಡಿದ್ದಾರೆ.

ಕಳೆದ ಮಾ.26ರಂದು ಬಿಜೆಪಿ ನಾಯಕ ಪತ್ರಿಕಾಗೋಷ್ಟಿಯಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿಯ ವಿರುದ್ಧ ಸುಳ್ಳಿನ ಆರೋಪ ಮಾಡಿದ್ದಾರೆ. ಇವರ ಆರೋಪದಲ್ಲಿ ಯಾವುದೆ ಸತ್ಯಾಂಶವಿಲ್ಲ. ಮಂಡಳಿಯು ಕೇಂದ್ರ ಮತ್ತು ರಾಜ್ಯ ಸರಕಾರದ ವಾಜಪೇಯಿ ನಗರ ವಸತಿ ಯೋಜನೆ ಹಾಗೂ ಮುಂದಿನ ವರ್ಷಗಳಲ್ಲಿ ಫಲಾನುಭವಿಗಳ ವಂತಿಕೆ ಸಮನ್ವಯದೊಂದಿಗೆ ಇನ್ನೂ ಹೆಚ್ಚಿನ ಮನೆಗಳನ್ನು ಕೊಳಗೇರಿ ನಿವಾಸಿಗಳಿಗೆ ನಿರ್ಮಾಣ ಮಾಡಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದೆ ಎಂದರು.

ಕೊಳಗೇರಿ ಮಂಡಳಿಯ ಟೆಂಡರ್ ಪ್ರಕ್ರಿಯೆಗೆ ಏಕೈಕ ಟೆಂಡರ್‌ಗಳು ಹೆಚ್ಚಾಗಿ ಬಂದಿರುವ ಕಾರಣ ಈ ವಿಷಯವನ್ನು ಸರಕಾರದ ಗಮನಕ್ಕೆ ತರಲಾಯಿತು. ಈ ಹಿನ್ನೆಲೆಯಲ್ಲಿ ಸರಕಾರದ ನಿರ್ದೇಶನದ ಮೇರೆಗೆ ಟೆಂಡರ್ ಪ್ರಕ್ರಿಯೆಯನ್ನು ನಡೆಸಿದ್ದೇವೆ. ಇದಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳು ಪಾರದರ್ಶಕವಾಗಿದ್ದು, ಯಾರು ಬೇಕಾದರು ನೋಡಬಹುದೆಂದು ಅವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News