ಕೊಲ್ಲೂರು: ತೆಂಗಿನ ಮರದಿಂದ ಬಿದ್ದು ಮೃತ್ಯು
Update: 2018-03-27 22:40 IST
ಕೊಲ್ಲೂರು, ಮಾ.27: ಬೆಳ್ಳಾಲ ಗ್ರಾಮದ ಹಾರ್ಮಣ್ಣು ಎಂಬಲ್ಲಿ ತೆಂಗಿನ ಮರದಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಕೃಷಿಕರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮೃತರನ್ನು ಹಾರ್ಮಣ್ಣು ನಿವಾಸಿ ಗೋಪಾಲ ಶೆಟ್ಟಿ(55) ಎಂದು ಗುರುತಿಸ ಲಾಗಿದೆ. ಇವರು ಮಾ.21ರಂದು ಮನೆಯ ತೋಟದ ತೆಂಗಿನ ಮರದಿಂದ ತೆಂಗಿನ ಕಾಯಿಯನ್ನು ಕೊಯ್ಯಲು ಮರ ಹತ್ತುವಾಗ ಆಕಸ್ಮಿಕವಾಗಿ ಆಯತಪ್ಪಿ ಮರದಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರೆನ್ನಲಾಗಿದೆ.
ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಅವರು ಮಾ.27 ರಂದು ಬೆಳಗಿನ ಜಾವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.