×
Ad

ಉಡುಪಿ: ಜಗಜೀವನರಾಂ, ಅಂಬೇಡ್ಕರ್ ಜಯಂತಿ ಪೂರ್ವಭಾವಿ ಸಭೆ

Update: 2018-03-27 22:50 IST

ಉಡುಪಿ, ಮಾ.27: ಬಾಬು ಜಗಜೀವನರಾಂ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮ ಜಯಂತಿ ಆಚರಣೆ ಕುರಿತಂತೆ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಮಂಗಳವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು.

ಎ.5ರಂದು ನಡೆಯುವ ಬಾಬು ಜಗಜೀವನರಾಂ ಜಯಂತಿಯನ್ನು ಇಂದ್ರಾಳಿಯ ಆದಿವಾಸಿ ಭವನದಲ್ಲಿ ಏರ್ಪಡಿಸುವಂತೆ ತಿಳಿಸಿದ ಜಿಲ್ಲಾಧಿಕಾರಿ ಗಳು, ಎ.14ರಂದು ಆದಿಉಡುಪಿಯ ಅಂಬೇಡ್ಕರ್ ಭವನದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜನ್ಮದಿನಾಚರಣೆ ಕಾರ್ಯಕ್ರಮ ಆಯೋಜಿಸುವಂತೆ ಸೂಚಿಸಿದರು.
ಅಂಬೇಡ್ಕರ್ ಭವನದಲ್ಲಿ ನೀರಿನ ಸಂಪರ್ಕ ಇಲ್ಲವಾಗಿದ್ದು, ಸಂಪರ್ಕ ನೀಡು ವಂತೆ ಸಂಘಟನೆಗಳ ಮುಖಂಡರು ಜಿಲ್ಲಾಧಿಕಾರಿಗಳನ್ನು ಕೋರಿದರು. ಈ ಕುರಿತು ತಕ್ಷಣವೇ ಕ್ರಮ ಕೈಗೊಳ್ಳುವಂತೆ ನಗರಸಭೆಯ ಪೌರಾಯುಕ್ತರಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಬಾಬು ಜಗಜೀವನರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಜೀವನ,ಸಾಧನೆ ಕುರಿತಂತೆ ವಿಶೇಷ ಉಪನ್ಯಾಸ ಏರ್ಪಡಿಸುವಂತೆ ತಿಳಿಸಿದ ಜಿಲ್ಲಾಧಿಕಾರಿ, ಈ ಎರಡೂ ಕಾರ್ಯಕ್ರಮಗಳಲ್ಲಿ ಸರಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಹಾಜರಿರುವಂತೆ ಸೂಚಿಸಿದರು. 

ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಾನಂದ ಕಾಪಶಿ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ರಮೇಶ್, ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿ ಗಳು ಹಾಗೂ ವಿವಿಧ ಸಂಘಟನೆಳ ಮುಖಂಡರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News