ರಾಜ್ಯ ಚುನಾವಣೆ ಘೋಷಣೆ
Update: 2018-03-27 23:46 IST
ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೇ 12ರಂದು ಮತದಾನ ನಡೆಯಲಿದೆ. ಮುಖ್ಯ ಚುನಾವಣಾ ಆಯುಕ್ತ ಒ.ಪಿ.ರಾವತ್ ಮಂಗಳವಾರ ಹೊಸದಿಲ್ಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ವಿಧಾನಸಭಾ ಚುನಾವಣಾ ದಿನಾಂಕವನ್ನು ಘೋಷಿಸಿದರು. ಮೇ 12ರಂದು ರಾಜ್ಯದ ಎಲ್ಲಾ 224 ಕ್ಷೇತ್ರಗಳಿಗೂ ಮತದಾನ ನಡೆಯಲಿದ್ದು, ಮೇ 15ರಂದು ಮತ ಎಣಿಕೆ ನಡೆಯಲಿದೆ. ಕಳೆದ ಬಾರಿಯಂತೆ ಈ ಸಲವೂ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಮಂಗಳವಾರದಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿದೆ.